ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಿರುತೆರೆ ನಟ ಜಗನ್!

ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಕಿರುತೆರೆ ನಟ ಜಗನ್!

ಬೆಂಗಳೂರು: ಕಿರುತೆರೆ ನಟ ಹಾಗೂ ಬಿಗ್ ಬಾಸ್ ಸೀಸನ್ 5ನ ಸ್ಪರ್ಧಿ ಜಗನ್ನಾಥ್ ಚಂದ್ರಶೇಖರ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ಜಗನ್ ಅವರು 3 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ಗೆಳತಿ ರಕ್ಷಿತಾ ಮುನಿಯಪ್ಪ ಜೊತೆ ಇತ್ತೀಚಿಗಷ್ಟೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಈ ಬಗ್ಗೆ ತಮ್ಮ ಫೇಸ್ ಬುಕ್ ನಲ್ಲಿ ಹಂಚಿಕೊಂಡ
ರಕ್ಷಿತಾ ಮತ್ತು ಮೋಹನ್ ಕಳೆದ 3 ವರ್ಷಗಳಿಂದ ಪ್ರೀತಿಸುತ್ತಿದ್ದರು. ತಾವು ಪ್ರೀತಿ ಮಾಡುತ್ತಿದ್ದ ಬಗ್ಗೆ ಮನೆಯಲ್ಲಿ ತಿಳಿಸಿದ್ದಾರೆ. ಈಗ ಇವರಿಬ್ಬರ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕಿದೆ. ಹೀಗಾಗಿ 2 ಕುಟುಂಬದವರು ಒಪ್ಪಿ ಜಗನ್ ರಕ್ಷಿತಾ ನಿಶ್ಚಿತಾರ್ಥ ಮಾಡಿದ್ದಾರೆ.

ಇದೇ ವರ್ಷದ ಮೇ ತಿಂಗಳಿನಲ್ಲಿ ಜಗನ್-ರಕ್ಷಿತಾ ಮದುವೆ ನಡೆಯಲಿದೆ. ಜಗನ್ ಬಿಗ್ ಬಾಸ್ ಸೀಸನ್ 5 ರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದಾರೆ. ಖಾಸಗಿ ವಾಹಿನಿಯಲ್ಲಿ ಧಾರವಾಹಿಗಳಲ್ಲಿ ಅಭಿನಯಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos