ಬೆಂಗಳೂರು: ಡೇನಿಯಲ್ ಬಾಲಾಜಿ ಅವರಿಗೆ ಕಳೆದ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಡೇನಿಯಲ್ ಅವರ ಪಾರ್ಥಿವ ಶರೀರವನ್ನು ಇಂದು ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ.
ಡ್ಯಾನಿಯಲ್ ಬಾಲಾಜಿ ಅವರು ಅವರು ಪ್ರೊಡಕ್ಷನ್ ಮ್ಯಾನೇಜರ್ ಆಗಿ ಬಣ್ಣದ ಲೋಕದ ಜೊತೆ ನಂಟು ಬೆಳೆಸಿಕೊಂಡರು. ನಂತರದ ದಿನಗಳಲ್ಲಿ ಬಾಲಾಜಿ ಅವರಿಗೆ ಕಮಲ್ ಹಾಸನ್ ಜೊತೆ ನಟಿಸೋ ಅವಕಾಶ ಸಿಕ್ಕಿತು. ಕಮಲ್ ಹಾಸನ್ ನಟನೆಯ ‘ವೆಟ್ಟೈಯಾಡು ವಿಲೈಯಾಡು’ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿದ್ದರು. ಈ ಮೂಲಕ ಮೆಚ್ಚುಗೆ ಪಡೆದು ಬಂದರು. ಮಮ್ಮೂಟಿ ನಟನೆಯ ‘ಬ್ಲ್ಯಾಕ್’ಸಿನಿಮಾದಲ್ಲಿ ಬಾಲಾಜಿ ಬಣ್ಣ ಹಚ್ಚಿದ್ದರು. ಮೋಹನ್ಲಾಲ್ ನಟನೆಯ ‘ಭಗವಾನ್’, ಮಮ್ಮೂಟಿ ನಟನೆಯ ‘ಡ್ಯಾಡಿ ಕೂಲ್’ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿದ್ದರು.