ನಾನು ಪಕ್ಷದ ಪರ ಅಲ್ಲಾ ವ್ಯಕ್ತಿ ಪರ: ನಟ ದರ್ಶನ್

ನಾನು ಪಕ್ಷದ ಪರ ಅಲ್ಲಾ ವ್ಯಕ್ತಿ ಪರ: ನಟ ದರ್ಶನ್

ಮಂಡ್ಯ: ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರ ಅವರ ಪರವಾಗಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ಹಾಕಿ ಎಂದು ನಟ ದರ್ಶನ್ ಹೇಳಿದರು. ಬೆಳಗ್ಗೆಯಿಂದ ಮಂಡ್ಯ ಕ್ಷೇತ್ರದಲ್ಲಿ ರೋಡ್ ಶೋ ಮತ್ತು ಮತಯಾಚನೆ ಮಾಡುತ್ತಿದ್ದಾರೆ ದರ್ಶನ್.

ಹಲಗೂರಿನಲ್ಲಿ ಮಾತನಾಡಿದ ದರ್ಶನ್, ನಾನು ಯಾವುದೇ ಪಕ್ಷದ ಪರವಾಗಿ ಬರಲ್ಲ. ನಾನು ಬರೋದು ವ್ಯಕ್ತಿ ಪರವಾಗಿ. ಐದು ವರ್ಷದ ಹಿಂದೆ ನರೇಂದ್ರಸ್ವಾಮಿ ಸಹಾಯ ಮರೆಯಲ್ಲ. ಮೊದಲೇ ಶಾಸಕ ಉದಯ್ ಹೇಳಿದ್ರು ಸುಮಮ್ಮನಿಗೆ ಟಿಕೆಟ್ ಆಗಲಿಲ್ಲ. ಆದ್ರೆ ನಮಗೆ ಮಾಡಿ ಅಂದಿದ್ರು. ಮೊದಲು ಅವರು ಕೇಳಿದ ಕಾರಣ ನಾನು ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರು ಅವರಿಗೆ ಎಲ್ಲರೂ ಮತ ಹಾಕಿ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos