ನಟ ದರ್ಶನ್ ವಿರುದ್ದ 2 ದೂರು ದಾಖಲು

ನಟ ದರ್ಶನ್ ವಿರುದ್ದ 2 ದೂರು ದಾಖಲು

ಬೆಂಗಳೂರು: ನಟ ದರ್ಶನ್ ನಟನೆ ಕಾಟೇರ ಸಿನಿಮಾ ಬಹಳ ಅದ್ದೂರಿಯಾಗಿ 50 ದಿನ ಪೂರೈಸಿದೆ ಇದರ ಬೆನ್ನಲ್ಲೇ ನಟ ದರ್ಶನ್ ಅವರು ಸಿನಿಮಾ ಇಂಡಸ್ಟ್ರಿಗೆ ಬಂದು 25 ವರ್ಷ ಪೂರೈಸಿದ್ದಾರೆ. ಈ ಸಂಬಂಧ ಶ್ರೀರಂಗಪಟ್ಟಣದಲ್ಲಿ ನಟ ದರ್ಶನ್ ಅವರ ಬೆಳ್ಳಿ ಪರ್ವ ನಡೆಯಿತು.

ಶ್ರೀರಂಗಪಟ್ಟಣದಲ್ಲಿ ನಡೆದ 25ನೇ ವರ್ಷದ ಬೆಳ್ಳಿ ಸಂದರ್ಭದಲ್ಲಿ ಮಠಾಧೀಶರು, ಗಣ್ಯ ವ್ಯಕ್ತಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ದರ್ಶನ್‌, “ಇವತ್ತು ಇವಳಿರ್ತಾಳೆ, ನಾಳೆ ಅವಳಿರ್ತಾಳೆ’ ಎಂದು ಮಹಿಳೆಯರಿಗೆ ಅವಮಾನವಾಗುವ ರೀತಿಯಲ್ಲಿ ನಿಂದಿಸಿದ್ದಾರೆ. ಈ ಹಿಂದೆ ತಮ್ಮ ಪತ್ನಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಜೈಲಿಗೂ ಹೋಗಿದ್ದರು. ಹೀಗಾಗಿ ಪದೇ ಪದೆ ಮಹಿಳೆಯರ ವಿರುದ್ಧ ಹೇಳಿಕೆ ನೀಡುವ ದರ್ಶನ್‌ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಮಹಿಳೆಯರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ಹಾಗೂ ನಿರ್ಮಾಪಕ ಉಮಾಪತಿ ಗೌಡಗೆ ನಿಂದನೆ ಆರೋಪದಡಿ ನಟ ದರ್ಶನ್‌ ವಿರುದ್ಧ ಪುಟ್ಟೇನಹಳ್ಳಿ ಮತ್ತು ರಾಜರಾಜೇಶ್ವರಿನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ನಿನ್ನೆ ಪುಟ್ಟೇನಹಳ್ಳಿ ಪೊಲೀಸ್‌ ಠಾಣೆ ಮುಂಭಾಗ 50ಕ್ಕಿಂತಲೂ ಹೆಚ್ಚಿನ ಮಹಿಳೆಯರು ಜಮಾಯಿಸಿ ದರ್ಶನ್‌ ತಮ್ಮ ನಡವಳಿಕೆ ಸರಿಪಡಿಸಿಕೊಂಡು, ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ನಟ ದರ್ಶನ್‌ ವಿರುದ್ಧ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಪ್ರಕರಣ ಕೂಡ ದಾಖಲಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos