ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ

ಬೆಂಗಳೂರು, ಅ. 16 : ವಾತಾವರಣದಲ್ಲಿ ಉಂಟಾಗಿರುವ ಬದಲಾವಣೆಯಿಂದ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಸಾಧಾರಣ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರೀನಿವಾಸ್ ರೆಡ್ಡಿ ತಿಳಿಸಿದರು.
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಸಾಧಾರಣ ಪ್ರಮಾಣದ ಮಳೆ ಮುಂದುವರೆಯಲಿದೆ. ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ವಲಯಗಳಲ್ಲಿ ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯುವ ಮುನ್ಸೂಚನೆ ಇದೆ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos