ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್

ಮಂಗಳೂರು, ಅ. 24 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.
ಮೂರು ದಿನಗಳ ಕಾಲ ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ರೆಡ್ ಅಲರ್ಟ್ ಘೋಷಿಸಿದ್ದಾರೆ.
ಅ. ೧೮ರಿಂದ ನಿರಂತರ ಮಳೆ ಸುರಿಯುತ್ತಿದೆ. ಆದಾಗ್ಯೂ,ಯಾವುದೇ ಸಾವು ನೋವು ಸಂಭವಿಸಿಲ್ಲ. ಸುಮಾರು ೪೨ ಮನೆಗಳು ಹಾನಿಗೊಳಗಾಗಿವೆ. ಮನೆಗಳು ಸಂಪೂರ್ಣವಾಗಿ ಕುಸಿದ ಕುಟುಂಬಗಳಿಗೆ ೫ ಲಕ್ಷ ರೂ. ಮತ್ತು ಮನೆಗಳು ಭಾಗಶಃ ಹಾನಿಗೊಳಗಾದ ಕುಟುಂಬಗಳಿಗೆ ೫೦,೦೦೦ ರೂ. ಪರಿಹಾರ ಪ್ರಕಟಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos