ಇಳಯರಾಜ ಪುತ್ರಿ ವಿಧಿವಶ!

ಇಳಯರಾಜ ಪುತ್ರಿ ವಿಧಿವಶ!

ಬೆಂಗಳೂರು: ಭಾರತೀಯ ಸಿನಿಮಾ ರಂಗದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಪುತ್ರಿ, ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ಭವತಾರಿಣಿ ನಿನ್ನೆ ವಿಧಿವಶರಾಗಿದ್ದಾರೆ. ಕೆಲ ವರ್ಷಗಳಿಂದ ಅವರು ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.

ಚಿಕಿತ್ಸೆ ಪಡೆಯುವುದಕ್ಕಾಗಿ ಅವರು ಶ್ರೀಲಂಕಾಗೆ ತೆರಳಿದ್ದರು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಶ್ರೀಲಂಕಾದಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಅವರ ಪಾರ್ಥಿವ ಶರೀರವನ್ನು ಚೆನ್ನೈಗೆ ತರಲಾಗುತ್ತಿದೆ ಎಂದು ಅವರ ಪತಿ ಬಾಲಾಜಿ ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos