ಡಿಸಿ ಖಡಕ್ ವಾರ್ನಿಂಗ್

ಡಿಸಿ ಖಡಕ್ ವಾರ್ನಿಂಗ್

ದಾವಣಗೆರೆ, ಆ. 28 : ಐದು ಅಡಿಗಳಿಗಿಂತ ಎತ್ತರದ ಗಣಪತಿ ಮೂರ್ತಿಗಳನ್ನು ಕೂರಿಸಲು ಅನುಮತಿ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಜಿ. ಬೀಳಗಿ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ಏರ್ಪಸಿದ್ದ ಪರಿಸರ ಸ್ನೇಹಿ ಗೌರಿ ಗಣೇಶ ಹಬ್ಬ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಿಒಪಿ ಗಣಪತಿ ಅಥವಾ ಪ್ಲಾಸ್ಟಿಕ್ ಗಣೇಶ ಮೂರ್ತಿಗಳನ್ನು ಬಳಸುವಂತಿಲ್ಲ.
ಪರಿಸರಕ್ಕೆ ಹಾನಿಯಾಗದಂತೆ ಪರಿಸರ ಸ್ನೇಹಿಯಾಗಿ ಹಬ್ಬ ಆಚರಿಸಬೇಕು ಎಂದು ಹೇಳಿದರು. ಪಿಒಪಿ ಗಣಪತಿ ಮೂರ್ತಿಗಳನ್ನು ಮಾರಾಟ ಮಾಡುವಂತಿಲ್ಲ. ಹಾಗೇನಾದರೂ ಕಂಡುಬಂದಲ್ಲಿ ಸೂಕ್ತ ಕ್ರಮಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos