GT ವಿರುದ್ದ DC ತಂಡಕ್ಕೆ ಭರ್ಜರಿ ಜಯ

GT ವಿರುದ್ದ DC ತಂಡಕ್ಕೆ ಭರ್ಜರಿ ಜಯ

ಬೆಂಗಳೂರು: ನಿನ್ನೆ ನವದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ 40ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗುಜರಾತ್ ಟೈಟನ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿತು.

ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಐಪಿಎಲ್ 2024ರಲ್ಲಿ ಆಡಿದ 9 ಪಂದ್ಯಗಳಲ್ಲಿ 4 ಗೆಲುವು ಮತ್ತು 5 ಸೋಲು 8 ಅಂಕಗಳನ್ನು ಹೊಂದಿದ್ದು, ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ. ಇನ್ನು ಗುಜರಾತ್ ಟೈಟನ್ಸ್ ಕೂಡ ಆಡಿದ 9 ಪಂದ್ಯಗಳಲ್ಲಿ 4 ಗೆಲುವು ಮತ್ತು 5 ಸೋಲು 8 ಅಂಕಗಳನ್ನು ಹೊಂದಿದ್ದು, ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಇಳಿದಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅಕ್ಷರ್ ಪಟೇಲ್ ಮತ್ತು ನಾಯಕ ರಿಷಭ್ ಪಂತ್ ಅವರ ಭರ್ಜರ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 224 ರನ್ ಗಳಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಶಾ ಮತ್ತು ಜೇಕ್ ಫ್ರೇಸರ್-ಮೆಕ್‌ಗುರ್ಕ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 3.2 ಓವರ್‌ಗಳಲ್ಲಿ 35 ರನ್‌ಗಳ ಜೊತೆಯಾಟ ನೀಡಿದರು. ಆಗ ಜೊತೆಗೂಡಿದ ಅಕ್ಷರ್ ಪಟೇಲ್ ಮತ್ತು ನಾಯಕ ರಿಷಭ್ ಪಂತ್ ಕುಸಿದಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆಸರೆಯಾದರು. ಆಲ್‌ರೌಂಡರ್ ಅಕ್ಷರ್ ಪಟೇಲ್ 43 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್‌ಗಳ ಸಮೇತ 66 ರನ್ ಗಳಿಸಿದರು ಮತ್ತು ಐಪಿಎಲ್‌ನಲ್ಲಿ ಎರಡನೇ ಅರ್ಧಶತಕ ಬಾರಿಸಿದರು. ನಾಯಕ ರಿಷಭ್ ಪಂತ್ ತಮ್ಮ ಹಳೆಯ ಟಿ20 ಆಟಕ್ಕೆ ಮರಳಿದರು. ಕೇವಲ 43 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ ಅಜೇಯ 88 ರನ್ ಸಿಡಿಸಿದರು

225 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡ ವೃದ್ಧಿಮಾನ್ ಸಹಾ ಮತ್ತು ಡೇವಿಡ್ ಮಿಲ್ಲರ್ ಅವರ ಅರ್ಧಶತಕದ ಹೊರತಾಗಿಯೂ, 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 220 ರನ್‌ಗಳು ಮಾತ್ರ ಗಳಿಸಿತು ಮತ್ತು 4 ರನ್‌ಗಳ ಅಂತರದಿಂದ ರೋಚಕ ಸೋಲು ಅನುಭವಿಸಿತು.

ಗುಜರಾತ್ ಟೈಟನ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ವೃದ್ಧಿಮಾನ್ ಸಹಾ ಮತ್ತು ನಾಯಕ ಶುಭ್ಮನ್ ಗಿಲ್ ದೊಡ್ಡ ಆರಂಭ ನೀಡಲು ವಿಫಲರಾದರು.  ನಂತರ ಬಂದ ಸಾಯಿ ಸುದರ್ಶನ್ ಗುಜರಾತ್ ಟೈಟನ್ಸ್ ತಂಡದ ಮೊತ್ತ ಹೆಚ್ಚಿಸಲು ನೋಡಿದರು ಮತ್ತು ವೃದ್ಧಿಮಾನ್ ಸಹಾ ಜೊತೆಗೂಡಿ 2ನೇ ವಿಕೆಟ್‌ಗೆ 82 ರನ್‌ಗಳ ಜೊತೆಯಾಟ ನಿರ್ಮಿಸಿದರು. ಆಗ 25 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ 39 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಡೇವಿಡ್ ಮಿಲ್ಲರ್ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಗುಜರಾತ್ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ಯಲು ಪ್ರಯತ್ನಿಸಿದರು. ಕೇವಲ 23 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್‌ಗಳ ಮೂಲಕ 55 ರನ್ ಬಾರಿಸಿ ಔಟಾದರು. ಕೊನೆಯಲ್ಲಿ ರಶೀದ್ ಖಾನ್ 21 ರನ್ ಮತ್ತು ರವಿಶ್ರೀನಿವಾಸನ್ ಸಾಯಿಕಿಶೋರ್ 13 ರನ್ ಗಳಿಸಿದರು ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ.

 

ಫ್ರೆಶ್ ನ್ಯೂಸ್

Latest Posts

Featured Videos