LSG ವಿರುದ್ದ DCಗೆ ಭರ್ಜರಿ ಜಯ

LSG ವಿರುದ್ದ DCಗೆ ಭರ್ಜರಿ ಜಯ

ಬೆಂಗಳೂರು: ನಿನ್ನೆ ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್ 26ನೇ ಪಂದ್ಯದಲ್ಲಿ ಆತಿಥೇಯ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಈ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ ಪ್ರಸಕ್ತ ಐಪಿಎಲ್ ಪಂದ್ಯಾವಳಿಯಲ್ಲಿ ಎರಡನೇ ಅನುಭವಿಸಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ ತಮ್ಮ ಎರಡನೇ ಗೆಲುವು ದಾಖಲಿಸಿ ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೇರಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡ ನಾಯಕ ಕೆಎಲ್ ರಾಹುಲ್ ಮತ್ತು ಕ್ವಿಂಟನ್ ಡಿ ಕಾಕ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 2.5 ಓವರ್‌ಗಳಲ್ಲಿ 28 ರನ್‌ಗಳ ಜೊತೆಯಾಟವಾಡಿದರು. 13 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ 19 ರನ್ ಗಳಿಸಿದ್ದ ಕ್ವಿಂಟನ್ ಡಿ ಕಾಕ್ ವಿಕೆಟ್ ಒಪ್ಪಿಸಿದರು. ನಾಯಕ ಕೆಎಲ್ ರಾಹುಲ್ 22 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 39 ರನ್ ಗಳಿಸಿದರು.

ಮಧ್ಯಮ ಕ್ರಮಾಂಕದಲ್ಲಿ ದೀಪಕ್ ಹೂಡಾ 10 ರನ್ ಗಳಿಸಿದರೆ, ಆಯುಷ್ ಬದೊನಿ ಅರ್ಧಶತಕ ಬಾರಿಸಿ ತಂಡದ ಮೊತ್ತವನ್ನು 160ರ ಗಡಿ ದಾಟಿಸಲು ನೆರವಾದರು. ಬದೊನಿ 35 ಎಸೆತಗಳನ್ನು ಎದುರಿಸಿ 5 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ ಅಜೇಯ 55 ರನ್ ಬಾರಿಸಿದರು. ಆಯುಷ್ ಬದೊನಿ ಅವರ ಏಕೈಕ ಅರ್ಧಶತಕದ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 167 ರನ್ ಗಳಿಸಿತ್ತು.

168 ರನ್‌ಗಳ ಗುರಿ ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಫ್ರೇಸರ್-ಮೆಕ್‌ಗುರ್ಕ್ ಅವರ ಅರ್ಧಶತಕ ಮತ್ತು ರಿಷಭ್ ಪಂತ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ 18.1 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ತಲುಪಿತು. ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಡೇವಿಡ್ ವಾರ್ನರ್ ಮತ್ತು ಪೃಥ್ವಿ ಶಾ ಜೋಡಿ ಮೊದಲ ವಿಕೆಟ್‌ಗೆ 3.3 ಓವರ್‌ಗಳಲ್ಲಿ 24 ರನ್‌ಗಳ ಜೊತೆಯಾಟ ನೀಡಿತು.

ನಂತರ ಬಂದ ಚೊಚ್ಚಲ ಐಪಿಎಲ್ ಪಂದ್ಯವಾಡಿದ ಫ್ರೇಸರ್-ಮೆಕ್‌ಗುರ್ಕ್ ಅರ್ಧಶತಕ ಬಾರಿಸಿ ಅವಿಸ್ಮರಣೀಯಗೊಳಿಸಿದರು. ಕೇವಲ 35 ಎಸೆತಗಳಲ್ಲಿ 2 ಬೌಂಡರಿ ಹಾಗೂ 5 ಸಿಕ್ಸರ್‌ಗಳ ಮೂಲಕ 55 ರನ್ ಬಾರಿಸಿದರು. ಆರಂಭಿಕ ಬ್ಯಾಟರ್ ಪೃಥ್ವಿ ಶಾ 22 ಎಸೆತಗಳನ್ನು 6 ಬೌಂಡರಿಗಳ ನೆರವಿನಿಂದ 32 ರನ್ ಗಳಿಸಿದರು. ನಂತರ ಕ್ರೀಸ್‌ಗೆ ಬಂದ ನಾಯಕ ರಿಷಭ್ ಪಂತ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್‌ಗಳ ಸಮೇತ 41 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಅಜೇಯ 15 ರನ್ ಮತ್ತು ಶಾಯ್ ಹೋಪ್ ಅಜೇಯ 11 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos