ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ದರೇ ಒದ್ದು ಒಳಗೆ ಹಾಕುತ್ತೇವೆ- ಕೆಪಿಸಿಸಿ ಅಧ್ಯಕ್ಷ

ಯಾರಾದ್ರೂ ಪಾಕ್ ಪರ ಘೋಷಣೆ ಕೂಗಿದ್ದರೇ ಒದ್ದು ಒಳಗೆ ಹಾಕುತ್ತೇವೆ- ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ಮೂವರು  ಬಿಜೆಪಿಯ ಓರ್ವ ಅಭ್ಯರ್ಥಿ ಜಯ ಸಾಧಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ನಾಸಿರ್ ಹುಸೇನ್ ಜಯಗಳಿಸಿ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಕೂಗಿರುವ ಆರೋಪ ಕೇಳಿ ಬಂದಿದೆ.

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಅಭ್ಯರ್ಥಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಬಳಿಕ ಪಾಕ್ ಪರ ಘೋಷಣೆ ಕೂಗಿರುವ ಆರೋಪ ಸಂಬಂಧ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ಯಾರೂ ಕೂಡ ಪಾಕ್ ಪರ ಘೋಷಣೆ ಕೂಗಿಲ್ಲ ಯಾರೂದರೂ ಕೂಗಿದ್ದರೇ ಅವರನ್ನ ಒದ್ದು ಒಳಗೆ ಹಾಕುತ್ತೇವೆ ಎಂದು ತಿಳಿಸಿದರು.

ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಈ ವಿಚಾರದಲ್ಲಿ ರಾಜಕೀಯ ಮಾಡಿ ಗೊಂದಲ ಸೃಷ್ಠಿಸಲು ಯತ್ನಿಸಲಾಗುತ್ತಿದೆ. ಯಾರೆಲ್ಲಾ ಸುಳ್ಳು ಸುದ್ದಿ ಹಬ್ಬಿಸಿದ್ದಾರೋ ಅವರ ವಿರುದ್ದವೂ ಕ್ರಮ ಆಗಲಿದೆ ಎಂದು  ಡಿ.ಕೆ ಶಿವಕುಮಾರ್ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos