ಬಾಂಬ್‌ ಸ್ಪೋಟ: ರಾಜ್ಯದ ಘನತೆ ಕಾಪಾಡುವುದು ಪ್ರಮುಖ ಆದ್ಯತೆ: ಡಿಸಿಎಂ

ಬಾಂಬ್‌ ಸ್ಪೋಟ: ರಾಜ್ಯದ ಘನತೆ ಕಾಪಾಡುವುದು ಪ್ರಮುಖ ಆದ್ಯತೆ: ಡಿಸಿಎಂ

ಬೆಂಗಳೂರು: ನಿನ್ನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಆದಂತಹ ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿಬಿಳಿಸಿದೆ ನೆನ್ನೆ ಆದಂತಹ ಬಾಂಬ್ ಸ್ಪೋಟಕ್ಕೆ ತಳದಲ್ಲಿ 9 ಜನ ಮಂದಿಗೆ ಗಾಯಗಳಾಗಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್. : “ನಿನ್ನೆಯ ಸ್ಫೋಟದ ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈ ದುರ್ಘಟನೆಗೆ ಕಾರಣರಾಗಿರುವವರು ಯಾರೇ ಆಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಪ್ರಕರಣದ ತನಿಖೆಗೆ 7-8 ತಂಡಗಳನ್ನು ನಿಯೋಜನೆ ಮಾಡಲಾಗಿದ್ದು, ಬೆಂಗಳೂರಿನಲ್ಲಿರುವ ಸಿಸಿಟಿವಿ ಪರಿಶೀಲನೆ ಮಾಡಲಾಗುತ್ತಿದೆ. ದುಷ್ಕರ್ಮಿ ಹೇಗೆ ಬಂದ, ಯಾವ ರೀತಿ ಸ್ಫೋಟಕ ಇಟ್ಟು ಹೋದ ಎಂಬ ಬಗ್ಗೆ ವಿಡಿಯೋ ಸಿಕ್ಕಿವೆ. ಅವನ ಚಹರೆ ಬಗ್ಗೆ ಸುಳಿವು ಸಿಕ್ಕಿದೆ. ಈ ತನಿಖೆಯ ಮಾಹಿತಿಯನ್ನು ಈ ಹಂತದಲ್ಲಿ ಬಹಿರಂಗಪಡಿಸುವುದಿಲ್ಲ. ಪೊಲೀಸ್ ಅಧಿಕಾರಿಗಳು ತನಿಖೆ ಮಾಡಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದೇವೆ.

ಬಿಜೆಪಿ ನಾಯಕರು ಏನೇ ಟೀಕೆ ಮಾಡಿಕೊಳ್ಳಲಿ ನಾವು ಅವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ನಮಗೆ ರಾಜ್ಯದ ಘನತೆ ಕಾಪಾಡುವುದು ಪ್ರಮುಖ ಆದ್ಯತೆ. ಈ ಪ್ರಕರಣದಲ್ಲಿ ಸಹಕಾರ ಕೊಟ್ಟರೂ ಸರಿ, ರಾಜಕಾರಣ ಮಾಡಿದರೂ ಸರಿ. ನಾವು ಮಾತ್ರ ಈ ಪ್ರಕರಣವನ್ನು ಎಲ್ಲಾ ಆಯಾಮದಲ್ಲಿ ನೋಡಿ ತನಿಖೆ ಮಾಡಲಾಗುವುದು.”

ಸಹಕಾರ ನೀಡುತ್ತೇವೆ ಆದರೆ ಪ್ರಕರಣ ಮುಚ್ಚಿಹಾಕಬಾರದು ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಯಾವ ರೀತಿ ರಾಜಕಾರಣ ಮಾಡುತ್ತಿದ್ದಾರೆ ಎಂದು ನಾವು ನೋಡುತ್ತಿದ್ದೇವೆ. ಅವರ ಸಹಕಾರ ಬೇಡ. ಅವರು ಬೆಂಗಳೂರಿನ ಹೆಸರು ಹಾಳು ಮಾಡಲು ಏನೆಲ್ಲಾ ಪ್ರಯತ್ನ ಮಾಡುತ್ತಿದ್ದಾರೆ ಎಂಬುದು ನಮ್ಮ ಗಮನಕ್ಕೆ ಇದೆ” ಎಂದು ಕಿಡಿಕಾರಿದರು.

ಗಾಯಾಳುಗಳ ವಿಚಾರವಾಗಿ ಕೇಳಿದಾಗ, “ಗಾಯಾಳುಗಳ ಚಿಕಿತ್ಸೆ ವೆಚ್ಚವನ್ನು ಬಿಬಿಎಂಪಿ ವತಿಯಿಂದ ಭರಿಸಲಾಗುವುದು. ಪರಿಹಾರ ನೀಡುವ ಸಂದರ್ಭ ಬಂದರೆ ಅದನ್ನು ನೀಡುತ್ತೇವೆ” ಎಂದು ತಿಳಿಸಿದರು

 

ಫ್ರೆಶ್ ನ್ಯೂಸ್

Latest Posts

Featured Videos