ಟ್ಯಾಂಕರ್ ಮಾಲಿಕರು ಅಕಸ್ಮಾತ್ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದರೆ ಕ್ರಮ: ಡಿಸಿಎಂ

ಟ್ಯಾಂಕರ್ ಮಾಲಿಕರು ಅಕಸ್ಮಾತ್ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದರೆ ಕ್ರಮ: ಡಿಸಿಎಂ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಹೆಚ್ಚಾಗುತ್ತಿದೆ‌.‌ ಈ ಬಿಸಿಲಿನಿಂದಾಗಿ ಜನರು ರೋಸಿಹೋಗ್ತಿದ್ದು, ಕೆಲವೊಂದು ಏರಿಯಾಗಳಲ್ಲಿ ನೀರಿನ ಸಮಸ್ಯೆಯು ಕಾಡುವುದಕ್ಕೆ ಶುರುವಾಗಿದೆ. ಬೇಸಿಗೆಯನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಟ್ಯಾಂಕರ್ ಮಾಲೀಕರು ದುಪ್ಪಟ್ಟು ಹಣ ವಸೂಲಿಗೆ ಮುಂದಾಗಿವೆ. ಹೀಗಾಗಿ ನೀರು ಪೂರೈಸುವ ಖಾಸಗಿ ಟ್ಯಾಂಕರ್​​​​ಗಳಿಗೆ ಬಿಬಿಎಂಪಿ ಶಾಕ್ ಕೊಟ್ಟಿದೆ.

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದ್ದು ಟ್ಯಾಂಕರ್ ನೀರಿಗಾಗಿ ಜನರು ಮುಗಿಬಿದ್ದಿದ್ದಾರೆ ಕೆಲವು ಕಡೆ ಟ್ಯಾಂಕರ್ ಮಾಲೀಕರು ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಖಾಸಗಿ ಟ್ಯಾಂಕರ್ ಮಾಲೀಕರು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿರುವುದರ ಬಗ್ಗೆ ದೂರುಗಳು ಕೇಳಿ ಬರುತ್ತಿವೆ ಬೆಂಗಳೂರಿನ ನಿವಾಸಿಗಳಲ್ಲಿ ನನ್ನ ಮನವಿ ಏನೆಂದರೆ ಟ್ಯಾಂಕರ್ ಮಾಲಿಕರು ಅಕಸ್ಮಾತ್ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆದರೆ ಕೂಡಲೇ ಬಿಬಿಎಂಪಿ ಸಹಾಯವಾಣಿ 1533ಗೆ  ಕರೆ ಮಾಡಿ ದೂರು ಸಲ್ಲಿಸಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos