ಕಲಬುರಗಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡು ರಾಜ್ಯದಲ್ಲೇ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು ರಾಜ್ಯದೆಲ್ಲಡೆ ಅಭ್ಯರ್ಥಿಗಳು ಮತಯಾಚಿಸುತ್ತಿದ್ದಾರೆ. ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಮೈತ್ರಿಯಿಂದ ಜೆಡಿಎಸ್ ದೂರವಾಗಲಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಭವಿಷ್ಯ ನುಡಿದರು.
ಇಂದು ಕಲ್ಬುರ್ಗಿಯಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಎಂಪಿ ಚುನಾವಣೆ ಬಳಿಕ ರಾಜ್ಯದಲ್ಲಿ ಬದಲಾವಣೆಯಾಗಲಿದೆ. ಚುನಾವಣೆ ಬಳಿಕ ಮೈತ್ರಿಯಿಂದ ಜೆಡಿಎಸ್ ದೂರ ಇರುತ್ತೆ ಇಲ್ಲ ಅಂದರೆ ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗುತ್ತೆ. ಅವರ ಪಕ್ಷದ ಬದಲಾವಣೆ ಬಗ್ಗೆ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ ಕುಮಾರಸ್ವಾಮಿ ಹೇಳಿರುವವುದು ಸತ್ಯ ಎಂದರು.