ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಿಲ್ಲಾ ಎಂದು ಬಿಜೆಪಿಗರು ಗೂಬೆ ಕೂರಿಸುತ್ತಿದ್ದಾರೆ: ಡಿಸಿಎಂ

ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಿಲ್ಲಾ ಎಂದು ಬಿಜೆಪಿಗರು ಗೂಬೆ ಕೂರಿಸುತ್ತಿದ್ದಾರೆ: ಡಿಸಿಎಂ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಾಯಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ಹಲವು ನಾಯಕರು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರುತ್ತಿದ್ದಾರೆ.

“ರಾಜ್ಯದ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿ ಇದ್ದಷ್ಟು ಈ ದೇಶದ ಯಾವ ರಾಜ್ಯದಲ್ಲೂ ಇಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಮಿತ್ರರಿಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದೇ ಹುಬ್ಬಳ್ಳಿ ಕೊಲೆ ಪ್ರಕರಣಕ್ಕೆ ಕಾರಣ ಎನ್ನುವ ಬಿಜೆಪಿ ಆರೋಪದ ಬಗ್ಗೆ ಅವರು ಉತ್ತರಿಸಿದರು.

“ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗು ಹುನ್ನಾರವನ್ನು ವಿಪಕ್ಷ ನಾಯಕ ಆರ್. ಅಶೋಕ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಈ ರೀತಿ ಆಗಲು ನಾವು ಬಿಡುವುದಿಲ್ಲ. ನಿಷ್ಪಕ್ಷಪಾತವಾಗಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.

ಫ್ರೆಶ್ ನ್ಯೂಸ್

Latest Posts

Featured Videos