ಡಿಸಿಎಂ ಹುದ್ದೆ: ಪೈಪೋಟಿ

ಡಿಸಿಎಂ ಹುದ್ದೆ: ಪೈಪೋಟಿ

ಬೆಂಗಳೂರು ,ಡಿ.15 : ಒಂದೆಡೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದು ಹೊಸ ಬಿಜೆಪಿ ಶಾಸಕರ ಆತಂಕಕ್ಕೆ ಕಾರಣವಾಗಿದ್ದರೆ ಮತ್ತೂಂದೆಡೆ ಉಪ ಮುಖ್ಯ ಮಂತ್ರಿ ಸ್ಥಾನಕ್ಕೆ ಮೂಲ ಮತ್ತು ವಲಸಿಗ ಪ್ರಭಾವಿ ನಾಯಕರ ನಡುವೆ ಪೈಪೋಟಿ ಏರ್ಪಟ್ಟಿದ್ದು, ಕಗ್ಗಂಟಿನ ಸ್ವರೂಪ ಪಡೆಯುವ ಲಕ್ಷಣ ಕಾಣುತ್ತಿದೆ. ಡಿಸಿಎಂ ಹುದ್ದೆ ವಿಚಾರದಲ್ಲಿ ಈ ವರೆಗೆ ಮೌನ ವಹಿಸಿದ್ದ ಸಚಿವ ಶ್ರೀರಾಮುಲು ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು, ಉಪ ಮುಖ್ಯಮಂತ್ರಿ ಹುದ್ದೆ ಜನರ ಬೇಡಿಕೆ. ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದಿದ್ದಾರೆ. ಶ್ರೀರಾಮುಲು ಅವರ ನಡೆಗೆ ಸಮರ್ಥನೆ ಮತ್ತು ಅಪಸ್ವರವೆಂಬಂತೆ ಹಲವು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಚಿವ ಜಗದೀಶ್ ಶೆಟ್ಟರ್ ಅವರು ಶ್ರೀರಾಮುಲು ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್, ತಾನೂ ಹಿರಿಯ ನಾಗಿದ್ದು, ತನಗೂ ಅವಕಾಶ ಸಿಗಬೇಕಿತ್ತು ಎಂದಿದ್ದಾರೆ. ಸಚಿವ ಸಿ.ಟಿ. ರವಿ ಅವರು ಉಪ ಮುಖ್ಯಮಂತ್ರಿ ಹುದ್ದೆ ಹೆಚ್ಚಾದಷ್ಟು ಮಹತ್ವ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos