ಗಣ್ಯರ ಜತೆ ಡಿಸಿಎಂ ಚರ್ಚೆ

ಗಣ್ಯರ ಜತೆ ಡಿಸಿಎಂ ಚರ್ಚೆ

ಬೆಂಗಳೂರು:  ಕೋವಿಡ್‍ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ನೆರವಿಗೆ ಧಾವಿಸಿರುವ ರಾಜ್ಯ ಸರಕಾರವು, ಎಲ್ಲ ಸಮಸ್ಯೆಗಳನ್ನು ಹಂತಹಂತವಾಗಿ ಪರಿಹರಿಸಲು ನಿರ್ಧರಿಸಿದೆ.

ಚಿತ್ರರಂಗದ ಪ್ರಮುಖರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ಬುಧವಾರ ಚರ್ಚೆ ನಡೆಸಿದ್ದರು. ಆ ವೇಳೆ ಎಲ್ಲ ಸಮಸ್ಯೆಗಳ ಮಾಹಿತಿ ಪಡೆದಿದ್ದ ಅವರು ಈ ಸಮಸ್ಯೆಗಳ ಪರಿಹಾರದ ನಿಟ್ಟಿನಲ್ಲಿ ರಚನಾತ್ಮಕ ಮಾತುಕತೆ ನಡೆಸುವಂತೆ ಉಪಮುಖ್ಯಮಂತ್ರಿ ಡಾ. ಸಿ,ಎನ್.ಅಶ್ವತ್ಥನಾರಾಯಣ ಅವರಿಗೆ ಸೂಚಿಸಿದ್ದರು. ಅದರಂತೆ ಚಿತ್ರರಂಗದ ಪ್ರಮುಖರ ಜತೆ ಗುರುವಾರ ಚರ್ಚೆ ನಡೆಸಿದರಲ್ಲದೆ, ಪ್ರತಿಯೊಂದು ಬೇಡಿಕೆ ಈಡೇರಿಕೆಯ ಸಾಧಕಬಾಧಕವನ್ನು ಮುಕ್ತವಾಗಿ ಪರಿಶೀಲಿಸಿದರು.

ಈ ಬೇಡಿಕೆಗಳಲ್ಲಿ ಕೆಲವು ಕಾರ್ಮಿಕ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಇವುಗಳ ಬಗ್ಗೆ ಆದಷ್ಟು ಇವೆರಡೂ ಇಲಾಖೆಗಳ ಸಚಿವರೂ ಮತ್ತು ಅಧಿಕಾರಿಗಳ ಜತೆ ಮಾತುಕತೆ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದರು.

ಚಿತ್ರನಗರಿ ನಿರ್ಮಾಣ, ಕಾರ್ಮಿಕರ ಸಮಸ್ಯೆಗಳು, ಚಿತ್ರೀಕರಣದಲ್ಲಿ ಪ್ರಾಣಿಗಳನ್ನು ಬಳಕೆ ಬಿಕ್ಕಟ್ಟು, ಡಿಐ-ವಿಎಫ್‍ಕ್ಸ್ ಉದ್ಯಮಕ್ಕೆ ವಿದ್ಯುತ್ ಶುಲ್ಕ ವಿನಾಯಿತಿ, ಸಿನಿಮಾ ತೆರಿಗೆ, ಸಕಾಲ ವ್ಯವಸ್ಥೆ, ನಿರ್ಮಾಪಕರಿಗೆ ಜಿಎಸ್‍ಟಿ ವಾಪಸ್ ನೀಡಿವುದು, ಫೈರಸಿ ನಿಗ್ರಹ, ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಚಿತ್ರರಂಗದ ಅಧಿಕೃತ ಸಂಸ್ಥೆಯನ್ನಾಗಿ ಘೋಷಿಸುವುದು, ನೂತನ ಚಲನಚಿತ್ರ ನೀತಿ ರೂಪಿಸುವುದು, ಲಾಕ್‍ಡೌನ್ ವೇಳೆಯಲ್ಲಿ ಥಿಯೇಟರುಗಳಿಗೆ ಆಸ್ತಿ ತೆರಿಗೆಯಿಂದ ವಿನಾಯಿತಿ, ವಿದ್ಯುತ್ ಶುಲ್ಕ ಮನ್ನಾ, ಸಕಾಲಕ್ಕೆ ಸಬ್ಸಿಡಿ ನೀಡಿಕೆ ಸೇರಿದಂತೆ ಚಿತ್ರರಂಗದ ಗಣುರು ಮುಂದಿಟ್ಟ ಬೇಡಿಕೆಗಳ ಬಗ್ಗೆ ಉಪ ಮುಖ್ಯಮಂತ್ರಿ ಅವರು ಕೂಲಂಕಶವಾಗಿ ಚರ್ಚೆ ನಡೆಸಿ ಮಾತನಾಡಿದರು.

 

ಫ್ರೆಶ್ ನ್ಯೂಸ್

Latest Posts

Featured Videos