ಮುಖ್ಯಮಂತ್ರಿಗಳ ಮೇಲೆ ಸಚಿವರ ವಿಶ್ವಾಸ: ಡಿಸಿಎಂ ಡಾ. ಪರಮೇಶ್ವರ್

ಮುಖ್ಯಮಂತ್ರಿಗಳ ಮೇಲೆ ಸಚಿವರ ವಿಶ್ವಾಸ: ಡಿಸಿಎಂ ಡಾ. ಪರಮೇಶ್ವರ್

ಬೆಂಗಳೂರು, ಮೇ. 24, ನ್ಯೂಸ್ ಎಕ್ಸ್ ಪ್ರೆಸ್: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನಾಯಕತ್ವದಲ್ಲಿ ಮೈತ್ರಿ ಸರ್ಕಾರ ಮುಂದಿನ ನಾಲ್ಕು ವರ್ಷಗಳ ಕಾಲ ಯಶಸ್ವಿಯಾಗಿ ಕಾರ್ಯನಿರ್ವಹಿಸಲಿದೆ ಎಂದು ಉಪಮುಖ್ಯಮಂತ್ರಿ ಡಾ  ಜಿ. ಪರಮೇಶ್ವರ ಅವರು ತಿಳಿಸಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾ ದಲ್ಲಿ ಇಂದು ನಡೆದ ಅನೌಪಚಾರಿಕ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಉಪಮುಖ್ಯಮಂತ್ರಿಗಳು, ಇಂದಿನ ಸಭೆಯಲ್ಲಿ ಲೋಕಸಭಾ ಚುನಾವಣೆಯ ಒಟ್ಟಾರೆ ಫಲಿತಾಂಶ, ರಾಜ್ಯದ ಫಲಿತಾಂಶಗಳ ಕುರಿತು ಚರ್ಚೆ ಹಾಗೂ ವಿಶ್ಲೇಷಣೆ ನಡೆಸಲಾಯಿತು. ಲೋಕಸಭಾ ಚುನಾವಣೆ ಫಲಿತಾಂಶ ಕೇಂದ್ರ ಸರ್ಕಾರಕ್ಕೆ ನೀಡಿದ ಜನಾದೇಶವೇ ಹೊರತು ರಾಜ್ಯ ಸರ್ಕಾರಕ್ಕೆ ಅಲ್ಲ ಎಂದು ಸಚಿವ ಸಂಪುಟವು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ತಿಳಿಸಿದರು.

ಫಲಿತಾಂಶದ ನಂತರ ಸರ್ಕಾರದ ಕುರಿತು ಹೇಳಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಇಂದಿನ ಸಭೆಯಲ್ಲಿ ಎಲ್ಲ ಸಚಿವರು ಮುಖ್ಯಮಂತ್ರಿಗಳಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಲ್ಲ ಶಾಸಕರೂ ನಮ್ಮ ಜೊತೆಗಿದ್ದಾರೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ. ಇದಕ್ಕೆ ಸಮನ್ವಯ ಸಮಿತಿ ಅಧ್ಯಕ್ಷರೂ ಸಹ ಸಹಮತ ವ್ಯಕ್ತಪಡಿಸಿದ್ದಾರೆ. ಸರ್ಕಾರ ಬೀಳಿಸಲು ವಿಪಕ್ಷ ನಡೆಸುವ ಷಡ್ಯಂತ್ರಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಅವರು ತಿಳಿಸಿದರು.

ಮೈತ್ರಿ ಸರ್ಕಾರವು ಮುಂದಿನ ನಾಲ್ಕು ವರ್ಷಗಳಲ್ಲಿ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಲಿದೆ. ಜನತೆಗೆ ನಿರಾಶೆ ಮಾಡುವುದಿಲ್ಲ ಎಂದು ನುಡಿದರು.

ಫ್ರೆಶ್ ನ್ಯೂಸ್

Latest Posts

Featured Videos