ವಿಶೇಷ ಪ್ರಜೆ ಸಲ್ಲಿಸಿದ ಡಿಸಿಎಂ

  • In State
  • August 5, 2020
  • 151 Views
ವಿಶೇಷ ಪ್ರಜೆ ಸಲ್ಲಿಸಿದ ಡಿಸಿಎಂ

ಬೆಂಗಳೂರು:ಅತ್ತ ಆಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಬುಧವಾರ ಭೂಮಿ ಪೂಜೆ ನಡೆಯುತ್ತಿದ್ದರೆ ಇತ್ತ ಮಲ್ಲೇಶ್ವರದ ಪ್ರಸಿದ್ಧ ರಾಮಮಂದಿರದಲ್ಲಿ ವಿಶೇಷ ಪೂಜಾ ಸಂಭ್ರಮ.

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ನಡೆದ ಪೂಜಾ ಕೈಂಕಾರ್ಯದಲ್ಲಿ ಬಿಬಿಎಂಪಿ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ರಾಜು ಸೇರಿದಂತೆ ಹಲವು ಬಿಜೆಪಿ ಕಾರ್ಯಕರ್ತರು ಭಾಗವಹಿಸಿ, ಖುಷಿಪಟ್ಟರು.

ಪೂಜೆ ಬಳಿಕ ಅಲ್ಲಿ ನೆರೆದಿದ್ದ ಎಲ್ಲರಿಗೂ ಸಿಹಿ ಹಂಚಿ ನೂರಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ವಿವಾದಕ್ಕೆ ತೆರೆ ಎಳೆದಿದ್ದಕ್ಕೆ ಧನ್ಯತಾಭಾವ ಪ್ರದರ್ಶಿಸಿದರು. ರಾಮನ ಜನ್ಮಭೂಮಿಯಲ್ಲೇ ಮಂದಿರ ನಿರ್ಮಾಣವಾಗಬೇಕು ಎನ್ನುವ ಪ್ರತಿಯೊಬ್ಬ ಭಾರತೀಯನ ಕನಸು ನನಸಾಗಿದ್ದು ನಿಜಕ್ಕೂ ಸಂತಸದ ವಿಚಾರ ಎಂದು ಡಾ.ಅಶ್ವತ್ಥನಾರಾಯಣ ಇದೇ ಸಂದರ್ಭದಲ್ಲಿ ಹೇಳಿದರು.

೫೦೦ ವರ್ಷಗಳಿಂದ ನಡೆಯುತ್ತಿದ್ದ ಸಾತ್ವಿಕ ಸಂಘರ್ಷ ಮತ್ತು ೧೩೪ ವರ್ಷಗಳ ಕಾನೂನು ಹೋರಾಟದ ಬಳಿಕ ಮಂದಿರ ನಿರ್ಮಾಣಕ್ಕೆ ಹಾದಿ ಸುಗಮವಾಗಿದೆ. ಇವತ್ತಿನ ಈ ಕ್ಷಣಕ್ಕಾಗಿ ಸಂಕಲ್ಪ, ತ್ಯಾಗ ಮತ್ತು ಬಲಿದಾನ ಮಾಡಿದ ಎಲ್ಲ ಶ್ರದ್ಧಾಳುಗಳಿಗೂ ನನ್ನ ನಮನಗಳು ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ರಾಯರ ದರ್ಶನ

ರಾಮನ ಪೂಜೆ ಬಳಿಕ ಗುರು ರಾಘವೇಂದ್ರರ ಆರಾಧನೆ ಪ್ರಯುಕ್ತ ಹಲವು ಮಠಗಳಿಗೆ ಉಪ ಮುಖ್ಯಮಂತ್ರಿ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಮಲ್ಲೇಶ್ವರದ ೮ನೇ ಅಡ್ಡರಸ್ತೆ, ೪ನೇ ಅಡ್ಡರಸ್ತೆ, ಸಂಪಿಗೆ ರಸ್ತೆಯ ಪಲಿಮಾರುಮಠ, ಶೇಷಾಧಿಪುರದಲ್ಲಿನ ರಾಘವೇಂದ್ರ ಮಠಗಳಿಗೆ ತೆರಳಿ ಪೂಜೆ ಸಲ್ಲಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos