ಡಿಸಿಎಂ ಗೆ ಎಚ್ಡಿಕೆ ತಿರುಗೇಟು

ಡಿಸಿಎಂ ಗೆ ಎಚ್ಡಿಕೆ ತಿರುಗೇಟು

ಬೆಂಗಳೂರು, ಜ.12 : ರಾಜ್ಯದಲ್ಲಿ ಉದ್ಯೋಗ ಪಡೆಯಲು ಸೂಕ್ತ ಅಭ್ಯರ್ಥಿಗಳಿಲ್ಲ ಎಂಬ ಡಿಸಿಎಂ ಅಶ್ವಥ್ ನಾರಾಯಣ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.
ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿರುವ ಎಚ್ಡಿಕೆ, ರಾಜ್ಯದಲ್ಲಿ ಉದ್ಯೋಗಕ್ಕೆ ಬರವಿಲ್ಲ. ಸೂಕ್ತ ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ಡಿಸಿಎಂ ಅಶ್ವತ್ಥನಾರಾಯಣ ನೀಡಿರುವ ಹೇಳಿಕೆ ಬೌದ್ಧಿಕ ದಿವಾಳಿತನದಿಂದ ಕೂಡಿದೆ.

ಪಕೋಡ ತಯಾರಿಸಲು ಕೂಡ ಈರುಳ್ಳಿಕೊಳ್ಳಲೂ ಆರ್ಥಿಕವಾಗಿ ನಿಶಕ್ತರಾಗಿರುವ ನಿರುದ್ಯೋಗಿಗಳ ಕಣ್ಣಲ್ಲೇಕೆ ನೀರು ತರಿಸುವಿರಿ? ರಾಜ್ಯ ಸೇರಿದಂತೆ ದೇಶದಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ. ಹೊಸ ಉದ್ಯೋಗ ಸೃಷ್ಟಿ ಒತ್ತಟ್ಟಿಗಿರಲಿ. ಇರುವ ಉದ್ಯೋಗ ಕಳೆದುಕೊಂಡು ಉದ್ಯೋಗಸ್ಥರು ಬೀದಿಗೆ ಬಿದ್ದಿದ್ದಾರೆ. ಉದ್ಯೋಗಾಕಾಂಕ್ಷಿಗಳು ಕಂಗಾಲಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos