9 ಜನರ ದುರ್ಮರಣ

9 ಜನರ ದುರ್ಮರಣ

ರೇವಾ, ಡಿ. 5 : ನಿಂತಿದ್ದ ಟ್ರಕ್ ಗೆ ಹಿಂದುಗಡೆಯಿಂದ ಬಂದ ಬಸ್ ಡಿಕ್ಕಿ ಹೊಡೆದು ಸುಮಾರು ಒಂಬತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಗುರುವಾರ ನಡೆದಿದೆ. ಘಟನೆಯಲ್ಲಿ ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗುರುವಾರ ಮುಂಜಾನೆ ರೇವಾದಿಂದ ಸುಮಾರು 25 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ.

ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos