ಮಗಳ ಸಾವು : ತಾಯಿ ಆತ್ಮಹತ್ಯೆ

ಮಗಳ ಸಾವು : ತಾಯಿ ಆತ್ಮಹತ್ಯೆ

ಹೈದರಾಬಾದ್, ನ. 9 : ಮಗಳ ಸಾವಿನಿಂದ ಮನನೊಂದಿದ್ದ ತಾಯಿಯೊಬ್ಬರು ಅಪಾರ್ಟ್ಮೆಂಟ್ನ 4ನೇ ಮಹಡಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಮಂಜುಳಾ ಆತ್ಮಹತ್ಯೆ ಮಾಡಿಕೊಂಡ ತಾಯಿ. ಮಂಜುಳಾ ಪುತ್ರಿ ಮಾನಸಾ(12) 7ನೇ ತರಗತಿ ಓದುತ್ತಿದ್ದಳು. ಮಾನಸಾ ಚಿಕ್ಕ ವಯಸ್ಸಿನಲ್ಲಿಯೇ ಅಸ್ತಮಾ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದಳು.

ಪೋಷಕರು ಮಗಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ನೀಡುತ್ತಿದ್ದರು. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಮಾನಸಾ ತಾಯಿಯ ಮನೆಯಲ್ಲಿಯೇ ಮೃತಪಟ್ಟಿದ್ದಳು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮಂಜುಳಾರ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos