ಮಂತ್ರಿಯಾಗಿ ಸಾಲ ಮನ್ನಾ ಮಾಡೋದು ಗ್ಯಾರಂಟಿ

ಮಂತ್ರಿಯಾಗಿ ಸಾಲ ಮನ್ನಾ ಮಾಡೋದು ಗ್ಯಾರಂಟಿ

ಮಧುಗಿರಿ: ರಾಜ್ಯದಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತ ಹಾಗೂ ನಾನು ಸಹಕಾರ ಮಂತ್ರಿಯಾಗಿ ರೈತರು ಪಡೆದಿರುವ ಸಾಲವನ್ನು ಮನ್ನಾ ಮಾಡುವುದು ನಿಶ್ಚಿತ ಎಂದು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.
ಪಟ್ಟಣದ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿ ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ದಿ ಕೆಲಸಗಳನ್ನು ನೀಡಿತ್ತು, ಈ ಕಾರ್ಯಕ್ರಮಗಳೇ ಗ್ರಾಮ ಪಂಚಾಯಿತಿ ಚುನಾವಣೆ ಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ವರದಾನವಾಗಲಿದೆ ಎಂದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಜಾರಿಗೆ ತಂದಿದ್ದ ಹಲವಾರು ಜನಪರ ಯೋಜನೆಗಳ ಬಗ್ಗೆ ಕಾರ್ಯಕರ್ತರು ಮನೆಮನೆಗೆ ತೆರಳಿ ತಿಳಿಸಬೇಕಾದ ಅಗತ್ಯತೆ ಇದೆ ಎಂದರು.
ಗ್ರಾಮಗಳು ಅಭಿವೃದ್ದಿ ಯಾಗಬೇಕಾದರೆ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆಯಾಗ ಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಮುಖಂಡರುಗಳು ಸಣ್ಣಪುಟ್ಟ ಮನಸ್ತಾಪಗಳನ್ನು ಬದಿಗಿಟ್ಟು ಒಗ್ಗಟ್ಟಾಗಿ ಚುನಾವಣೆ ಎದುರಿಸಬೇಕು ಎಂದ ಅವರು, ಕಾರ್ಯಕರ್ತರು ಚುನಾವಣೆಯಲ್ಲಿ ಉತ್ಸಾಹದಿಂದ ಕಾರ್ಯ ನಿರ್ವಹಿಸಬೇಕು. ಯಾರೂ ಕೂಡ ಉದಾಸೀನ ಮಾಡಬಾರದು ಎಂದು ಕಿವಿಮಾತು ಹೇಳಿ, ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಬಾರದು ಎಂದು ತಿಳಿಸಿದರು.
ಎತ್ತಿನಹೊಳೆ ಯೋಜನೆಯ ಕಾಮಗಾರಿ ಮಂದಗತಿಯಲ್ಲಿ ನಡೆಯುತ್ತಿದ್ದು, ಈ ಕಾಮಗಾರಿ ಯನ್ನು ತ್ವರಿತಗತಿಯಲ್ಲಿ ಮಾಡುವ ಮೂಲಕ ತಾಲೂಕಿನ ಕೆರೆಗಳಿಗೆ ನೀರು ಹರಿಸಿ ರೈತರಿಗೆ ಅನುಕೂಲವಾಗುವಂತೆ ಮಾಡಬೇಕು. ರೈಲ್ವೆ ಯೋಜನೆಯ ಕಾಮಗಾರಿ ಹಾಗೂ ಮಧುಗಿರಿ ಜಿಲ್ಲಾ ಕೇಂದ್ರವನ್ನಾಗಿಸಲು ಸರ್ಕಾರವನ್ನು ಒತ್ತಾಯಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos