ಮೃತ ವಿದ್ಯಾರ್ಥಿಗಳಿಗೆ ಪರಿಹಾರ ಘೋಷಿಸಿದ ಸಿಎಂ

ಮೃತ ವಿದ್ಯಾರ್ಥಿಗಳಿಗೆ ಪರಿಹಾರ ಘೋಷಿಸಿದ ಸಿಎಂ

ಬಾಗಲಕೋಟೆ: ಶಾಲಾ ವಾಹನ ಮತ್ತು ಟ್ರ್ಯಾಕ್ಟ‌ರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ  ತಾಲೂಕಿನ ಆಲಗೂರ ಗ್ರಾಮದ ಬೆಳಗಾವಿ ವಿಜಯಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಸಮೀಪದಲ್ಲಿ ಶಾಲಾ ಬಸ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಅಪಘಾತ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ನಿನ್ನೆ ಸ್ನೇಹಿತರೊಟ್ಟಿಗೆ ಕಾರ್ಯಕ್ರಮ ಮುಗಿಸಿಕೊಂಡು ಕವಟಗಿ ಗ್ರಾಮದ ಕಡೆಗೆ ಸ್ಕೂಲ್‌ಬಸ್ ಹೊರಟಿತ್ತು. ರಾತ್ರಿ 12 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಸದ್ಯ ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಈ ಬಗ್ಗೆ ಸಿದ್ದರಾಮಯ್ಯ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. “ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ‌ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos