ಬಾಂಗ್ಲಾ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧಾರ

ಬಾಂಗ್ಲಾ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧಾರ

ಬೆಂಗಳೂರು, ಜ.11  ರಾಜ್ಯದಲ್ಲಿ ಯಾವುದೇ ದಾಖಲಾತಿ ಇಲ್ಲದೆ ವಾಸಿಸುತ್ತಿರುವ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರ ಕಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ.

ಇಂದು ಚಿತ್ರಕಲಾ ಪರಿಷತ್ತಿನಲ್ಲಿ ಛಾಯಾಗ್ರಾಹಕ ಸುದೇಶ್ ಶೆಟ್ಟಿ ಅವರ ಬಾಂಗ್ಲಾ ವಲಸಿಗರ ಕುರಿತು ಆಯೋಜಿಸಿದ್ದ ಛಾಯಾಚಿತ್ರ ಪ್ರದರ್ಶನದ ಉದ್ಘಾಟನೆ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ವಾಸಿಸಿದ್ದು, ಇವರೆಲ್ಲರೂ ಜೋಪಡಿಗಳಲ್ಲಿ, ಮಾರುಕಟ್ಟೆಗಳಲ್ಲಿ ಹಾಗೂ ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸಿ ಜೀವನ ಸಾಗಿಸುತ್ತಿದ್ದು, ಇಂತಹವರ ವಿರುದ್ಧ ಪೌರತ್ವ ಕಾಯ್ದೆ ಜಾರಿಯಾದ ಹಿನ್ನೆಲೆಯಲ್ಲಿ ದಾಖಲಾತಿ ಪರಿಶೀಲನೆ ನಡೆಸಲಾಗುವುದು. ಒಂದು ವೆಳೆ ದಾಖಲಾತಿ ಹೊಂದಿರದಿದ್ದರೆ ಯಾವುದೇ ಮುಲಾಜಿಲ್ಲದೆ ಇಂತಹವರನ್ನುದೇಶದಿಂದ ಹೊರ ಹಾಕಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.

ಪೌರತ್ವ ಕಾಯ್ದೆಯ ವಿರುದ್ಧ ದಾಖಲಾತಿಯನ್ನು ಹೊಂದಿರುವ ಯಾವುದೇ ಭಾರತೀಯ ಮೂಲ ಪ್ರಜೆಗಳು ಭಯ ಪಡುವ ಅಗತ್ಯವಿಲ್ಲ. ಆಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾ ದೇಶದಿಂದ ಹೊಲಸೆ ಬಂದವರಿಗೆ ಮಾತ್ರ ಈ ಕಾಯ್ದೆ ಅನ್ವಯಿಸಲಿದ್ದು, ಇದನ್ನು ರಾಜಕೀಯವಾಗಿ ಪರಿಗಣಿಸಬಾರದು ಹಾಗೂ ಇದು ದೇಶದ ಜನತೆಯ ಅಸ್ತಿತ್ವದ ಪ್ರಶ್ನೆಯಾಗಿದೆ. ಹಾಗಾಗಿ ಪೌರತ್ವ ಕಾಯ್ದೆ ಕುರಿತು ಭಾರತೀಯರು ಭಯ ಪಡುವ ಅಗತ್ಯವಿಲ್ಲ. ಆದರೆ ದಾಖಲಾತಿ ಇಲ್ಲದವರನ್ನು ಹೊರ ಕಳಿಸಲಾಗುವುದು ಎಂದು ತಿಳಿಸಿದರು.

ಪ್ರದರ್ಶನದಲ್ಲಿ ಸುಮಾರು 40ಕ್ಕಿಂತಲೂ ಹೆಚ್ಚು ಛಾಯಾಚಿತ್ರಗಳನ್ನು ಅನಾವರಣಗೊಳಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ  ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್, ಅದಮ್ಯ ಚೇತನ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್ ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos