ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿ

ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಪಂಜಾಬ್ ಕಿಂಗ್ಸ್ ಮುಖಾಮುಖಿ

ಬೆಂಗಳೂರು: ನಿನ್ನೆ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ ನಡುವಿನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ.

ಇಂದು ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ ಇಂದು  ಐಪಿಎಲ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲಿದ್ದ ರಿಷಬ್‌ ಪಂತ್ ಕ್ರಿಕೆಟ್ ನಿಂದ ದೂರ ಉಳಿದಿದ್ದು ಚೇತರಿಸಿಕೊಳ್ಳುವ ಮೂಲಕ ಇದೀಗ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಮರಳಿದ್ದು ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.‌

ಈ ವರೆಗೂ ಐಪಿಎಲ್ ಟ್ರೋಫಿ ಗೆಲ್ಲಲು ವಿಫಲವಾಗಿರುವ ಡೆಲ್ಲಿ ಕ್ಯಾಪಿಟಲ್ಸ್ -ಪಂಜಾಬ್ ಕಿಂಗ್ಸ್ 17ನೇ ಆವೃತ್ತಿ ಟೂರ್ನಿಯಲ್ಲಿ ಇಂದು ಮುಖಾಮುಖಿಯಾಗಲಿವೆ. ಪಂದ್ಯಕ್ಕೆ ಪಂಜಾಬ್‌ನ ಹೊಸ ತವರು ಮುಲ್ಲಾನ್ಪುರ ಕ್ರೀಡಾಂಗಣ ಆತಿಥ್ಯ ವಹಿಸಲಿದೆ.

ನಾಯಕ ರಿಷಭ್ ಪಂತ್ 15 ತಿಂಗಳ ಬಳಿಕ ಸ್ಪರ್ಧಾತ್ಮಕ ಕ್ರಿಕೆಟ್ ಗೆ ಮರಳುತ್ತಿರುವುದು ಡೆಲ್ಲಿಗೆ ನೈತಿಕ ಬಲ ಒದಗಿಸಿದೆ. ಡೇವಿಡ್ ವಾರ್ನರ್, ಪೃಥ್ವಿ ಶಾ, ಮಿಚೆಲ್ ಮಾರ್ಷ್, ಟ್ರಿಸ್ಟನ್ ಸ್ಟಬ್ಸ್ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಬೌಲಿಂಗ್ ವಿಭಾಗದಲ್ಲಿ ಏನ್ರಿಚ್ ನೋಕಿಯಾ, ಮುಕೇಶ್ ಕುಮಾರ್, ಕುಲ್ದೀಪ್, ಅಕ್ಷರ್ ಪಟೇಲ್ ಅಸಾಧಾರಣ ಪ್ರದರ್ಶನ ನೀಡಬೇಕಿದೆ.

ಅತ್ತ ಪಂಜಾಬ್ ಕಳೆದ 5 ಆವೃತ್ತಿಗಳಲ್ಲಿ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕಿಂತ ಮೇಲೇರಿಲ್ಲ. ಲಿಯಾಮ್‌ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಸಿಕಂದರ್ ರಾಜಾ ತಂಡದಲ್ಲಿರುವ ತಜ್ಞ ಆಲ್ರೌಂಡರ್‌ಗಳು. ಕನ್ನಡಿಗ ವೇಗಿ ವಿದ್ವತ್ ಕಾವೇರಪ್ಪ ಆಡುವ ಅವಕಾಶ ಗಿಟ್ಟಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

ಐಪಿಎಲ್ ಇತಿಹಾದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಒಟ್ಟು 32 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಉಭಯ ತಂಡಗಳು ಸಮಬಲದ ಪ್ರದರ್ಶನ ತೋರಿವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು 16 ಪಂದ್ಯಗಳನ್ನು ಜಯಿಸಿದರೆ, ಪಂಜಾಬ್ ಕಿಂಗ್ಸ್ ತಂಡವು ಕೂಡಾ 16 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ.

 

ಫ್ರೆಶ್ ನ್ಯೂಸ್

Latest Posts

Featured Videos