ಡೆಲ್ಲಿ ಕ್ಯಾಪಿಟಲ್ಸ್‌ ತಂಡದಿಂದ ಸಿಕ್ತು ಫ್ಯಾನ್ಸ್​ಗೆ ಬಂಪರ್ ಸುದ್ದಿ

ಡೆಲ್ಲಿ ಕ್ಯಾಪಿಟಲ್ಸ್‌ ತಂಡದಿಂದ ಸಿಕ್ತು ಫ್ಯಾನ್ಸ್​ಗೆ ಬಂಪರ್ ಸುದ್ದಿ

ಬೆಂಗಳೂರು: 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್​ ಆರಂಭಕ್ಕೆ ಬಿಸಿಸಿಐ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಸೂಪರ್​ ಸ್ಟಾರ್​ ಆಟಗಾರರ ಆಟವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ತಾರಾ ಕ್ರಿಕೆಟಿಗರು ಸಹ 2024ರ ಐಪಿಎಲ್​ ಮನರಂಜನೆ ನೀಡಲು ಸಜ್ಜಾಗಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024 ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿ ಲೋಕಸಭೆ ಚುನಾವಣೆಯ ಕಾರಣ, ಮೊದಲ 21 ದಿನಗಳ ವೇಳಾಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರ ನಡುವೆ ರಿಷಭ್ ಪಂತ್ ಅಭಿಮಾನಿಗಳಿಗೆ ಶುಭಸುದ್ದಿ ಕೂಡ ಸಿಕ್ಕಿದೆ. ಐಪಿಎಲ್ 2024 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮೊದಲ ಪಂದ್ಯದಲೇ ರಿಷಭ್ ಪಂತ್ ನಾಯಕನಾಗಿ ಮುನ್ನಡೆಸಲಿದ್ದಾರೆ ಎಂದು ಫ್ರಾಂಚೈಸ್‌ನ ಸಹ-ಮಾಲೀಕ ಪಾರ್ಥ್ ಜಿಂದಾಲ್ ತಿಳಿಸಿದ್ದಾರೆ. ಹಾಗೆಯೆ ಅನ್ರಿಚ್ ನಾರ್ಟ್ಜೆ ಐಪಿಎಲ್‌ನಲ್ಲಿ ಪುನರಾಗಮನ ಮಾಡಲಿದ್ದಾರೆ ಎಂದು ಜಿಂದಾಲ್ ಖಚಿತ ಪಡಿಸಿದ್ದಾರೆ.

ಪಂತ್ ತಮ್ಮ ವಿಕೆಟ್ ಕೀಪಿಂಗ್ ಕಸರತ್ತನ್ನು ಪ್ರಾರಂಭಿಸಿದ್ದಾರೆ. ಬ್ಯಾಟಿಂಗ್ ಮಾಡುತ್ತಿದ್ದಾರೆ. ರನ್​ಗೆಂದು ಓಡುತ್ತಿದ್ದಾರೆ ಎಂದು ಪಾರ್ಥ್ ಹೇಳಿದ್ದಾರೆ. ಆದಾಗ್ಯೂ, ಅವರು ಐಪಿಎಲ್ 2024ರ ಮೊದಲಾರ್ಧದಲ್ಲಿ ವಿಕೆಟ್ ಕೀಪಿಂಗ್ ಮಾಡುವುದಿಲ್ಲ, ಅವರ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

“ರಿಷಭ್ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅವರು ಐಪಿಎಲ್‌ಗೆ ಸಂಪೂರ್ಣವಾಗಿ ಫಿಟ್ ಆಗುವ ಸಾಧ್ಯತೆಯಿದೆ. ಅವರು ಐಪಿಎಲ್ ಆಡುತ್ತಾರೆ, ಮೊದಲ ಪಂದ್ಯದಿಂದಲೇ ತಂಡವನ್ನು ಮುನ್ನಡೆಸುತ್ತಾರೆ. ಮೊದಲ ಏಳು ಪಂದ್ಯಗಳಲ್ಲಿ ಅವರು ಬ್ಯಾಟರ್ ಆಗಿ ಮತ್ತು ನಾಯಕನಾಗಿ ಮಾತ್ರ ಕಾಣಿಸಲಿದ್ದಾರೆ. ನಂತರ ಅವರ ದೇಹವು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದರ ಆಧಾರದ ಮೇಲೆ ನಿರ್ಧಾರ ಮಾಡುತ್ತೇವೆ,” ಎಂದು ಪಾರ್ಥ್ ಜಿಂದಾಲ್ ಹೇಳಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos