ಇಂದು ರೈತರಿಂದ ದೆಹಲಿ ಚಲೋ

 ಇಂದು ರೈತರಿಂದ ದೆಹಲಿ ಚಲೋ

ನವದೆಹಲಿ: ಇಡೀ ದೇಶದಾದ್ಯಂತ ರೈತರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಪ್ರತಿಭಟನೆಗೆ ಕರೆಕೊಟ್ಟಿದ್ದಾರೆ. 200ಕ್ಕೂ ಹೆಚ್ಚು ರೈತ ಸಂಘಗಳು ಈ ಘೋಷಣೆ ಮಾಡಿದ್ದಾರೆ. ಕನಿಷ್ಠ ಬೆಂಬಲ ಬೆಲೆ‌ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವು ರಾಜ್ಯಗಳ ರೈತರು ಇಂದು ‘ದಿಲ್ಲಿ ಚಲೋ’ಹಮ್ಮಿಕೊಂಡಿದ್ದಾರೆ.‌

ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಮತ್ತು ಕೃಷಿ ಸಚಿವ ಅರ್ಜುನ್ ಮುಂಡಾ ಅವರು ರೈತ ಮುಖಂಡರೊಂದಿಗೆ ಚಂಡೀಗಢದಲ್ಲಿ ಸೋಮವಾರ ಮಧ್ಯರಾತ್ರಿಯವರೆಗೆ ಸಭೆ ನಡೆಸಿದ್ದು, ಪ್ರಯೋಜನವಾಗಿಲ್ಲ.

ಆದರೆ, ರೈತರ ಮೂರು ಪ್ರಮುಖ ಬೇಡಿಕೆಗಳಾದ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವ ಕಾನೂನನ್ನು ಜಾರಿಗೊಳಿಸುವುದು, ರೈತರ ಸಾಲ ಮನ್ನಾ ಮತ್ತು ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಅನುಷ್ಠಾನದ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.

ಸಭೆಯ ಬಳಿಕ ತಡರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡಿದ, ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಸರ್ವಾನ್ ಸಿಂಗ್ ಪಂಧೇರ್ ‘ದಿಲ್ಲಿ ಚಲೋ’ ಮೆರವಣಿಗೆ ನಡೆಯಲಿದೆ. ಪ್ರತಿಭಟನಾ ಮೆರವಣಿಗೆ ಕೈಗೊಂಡಿರುವ ರೈತರು ದೆಹಲಿ ಪ್ರವೇಶಿಸದಂತೆ ತಡೆಯಲು ಪೊಲೀಸರು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಂಡಿದ್ದಾರೆ. ಸಿಂಘು, ಟಿಕ್ರಿ ಮತ್ತು ಗಾಝಿಪುರ ಗಡಿಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸಾರ್ವಜನಿಕ ಸಭೆಗಳು ನಡೆಸುವುದಕ್ಕೆ ಮತ್ತು ಟ್ರ್ಯಾಕ್ಟರ್, ಟ್ರಾಲಿಗಳು ನಗರಕ್ಕೆ ಪ್ರವೇಶಿಸದಂತೆ ಪೊಲೀಸರು ಒಂದು ತಿಂಗಳ ಕಾಲ ನಿಷೇಧ ಹೇರಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos