ರೈತರ ದೆಹಲಿ ಚಲೋ: ದೆಹಲಿಯಲ್ಲಿ ಸೆಕ್ಷನ್‌ 144 ಜಾರಿ!

ರೈತರ ದೆಹಲಿ ಚಲೋ: ದೆಹಲಿಯಲ್ಲಿ ಸೆಕ್ಷನ್‌ 144 ಜಾರಿ!

ಬೆಂಗಳೂರು: ದೆಹಲಿಯ‌ ಜಂತರ್​ ಮಂತರ್​​ನಲ್ಲಿ ಮಂಗಳವಾರ ಕಿಸಾನ್ ಮೋರ್ಚಾ ವತಿಯಿಂದ ಕಾರ್ಯಕ್ರಮ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಭಾಗವಹಿಸುವುದಕ್ಕಾಗಿ ರಾಜ್ಯದ ರೈತರು ನಿಜಾಮುದ್ದೀನ್ ಎಕ್ಸಪ್ರೆಸ್ ರೈಲು ಮೂಲಕ ತೆರಳುತ್ತಿದ್ದರು.

ಸದ್ಯ ವಶಕ್ಕೆ ಪಡೆಯಲಾಗಿರುವ ರೈತರನ್ನು ಕಲ್ಯಾಣ ಮಂಟಪವೊಂದರಲ್ಲಿ ಇರಿಸಿಕೊಳ್ಳಲಾಗಿದೆ. ಅಲ್ಲಿಯೇ ‘ರೈತ ವಿರೋಧಿ ಮಧ್ಯಪ್ರದೇಶ ಪೊಲೀಸರಿಗೆ ಧಿಕ್ಕಾರ’ ಎಂದು ಘೋಷಣೆ ಕೂಗಿ ರತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧವೂ ಘೋಷಣೆಗಳನ್ನು ಕೂಗಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ರೈತರ ಪ್ರತಿಭಟನೆ ಹಮ್ಮಿಕೊಂಡಿದೆ.

ದೆಹಲಿಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ 200ಕ್ಕೂ ಹೆಚ್ಚು ಸಂಘಟನೆಗಳ ಸದಸ್ಯರು ಭಾಗವಹಿಸಲಿದ್ದಾರೆ ಎನ್ನಲಾಗಿದೆ. ರೈತರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಪಿಂಚಣಿ ಮತ್ತು ವಿಮಾ ಯೋಜನೆಗಳಿಗೆ ಖಾತರಿ ನೀಡುವ ಕಾನೂನನ್ನು ರೂಪಿಸುವಂತೆ ಒತ್ತಾಯಿಸುತ್ತಿದ್ದಾರೆ. ಈ ಮಧ್ಯೆ ಮುನ್ನಚ್ಚರಿಕಾ ಕ್ರಮವಾಗಿ ಹರಿಯಾಣ ಸರ್ಕಾರ ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸಂಪರ್ಕವನ್ನು ಸ್ಥಗಿತಗೊಳಿಸಲು ಆದೇಶಿಸಿದೆ. ಮಂಗಳವಾರ ರಾತ್ರಿಯವರೆಗೆ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ನಾಳೆ ರೈತರು ದೆಹಲಿ ಚಲೋಗೆ ಕಾರ್ಯನಿರ್ವ ಹಿನ್ನೆಲೆ ಇಡೀ ದೇಹದಲ್ಲಿ ಸೆಕ್ಷನ್ 144 ವಿಧಿಸಲಾಗಿದೆ ಎಂದು ದೆಹಲಿ ಪೊಲೀಸ್ ಆಯುಕ್ತ ಸಂಜಯ್ ಅರೋರ ಎಂದು ತಿಳಿಸಿದ್ದಾರೆ. ಹೆಚ್ಚುವರಿಯಾಗಿ ರಾಜಧಾನಿಯ ಶಹದಾರ ಮತ್ತು ಗಾಂಧಿನಗರ ಪ್ರದೇಶಗಳಲ್ಲಿ ಶಿಕ್ಷಣದ 144 ಅನ್ನು ಜಾರಿಗೆ ತರಲಾಗಿದ್ದು ಸಭೆಗಳನ್ನು ವಿಧಿಸಲಾಗಿದೆ .

 

ಫ್ರೆಶ್ ನ್ಯೂಸ್

Latest Posts

Featured Videos