ದೆಹಲಿ ಹಿಂಸಾಚಾರ: ಸಚಿವ ಸಂಪುಟ ಸಭೆ ಕರೆದ ಕೇಂದ್ರ ಸರ್ಕಾರ

ದೆಹಲಿ ಹಿಂಸಾಚಾರ: ಸಚಿವ ಸಂಪುಟ ಸಭೆ ಕರೆದ ಕೇಂದ್ರ ಸರ್ಕಾರ

ನವದೆಹಲಿ, ಫೆ. 26: ಸಿಎಎ ಪರ-ವಿರೋಧಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು ಈಶಾನ್ಯ ದೆಹಲಿಯಲ್ಲಿ ಈವರೆಗೆ 20 ಜನ ಬಲಿಯಾಗಿದ್ದಾರೆ ಅಲ್ಲದೆ, 150ಕ್ಕೂ ಜನ ಗಾಯಗೊಂಡಿದ್ದಾರೆ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಇಂದು ತುರ್ತು ಸಚಿವ ಸಂಪುಟ ಸಭೆ ಕರೆದಿದೆ.

ಹಿಂಸಾಚಾರ ನಡೆದ ಪ್ರದೇಶದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರು ಹಾಗೂ ಪ್ಯಾರಾಮಿಲಿಟರಿ ಪಡೆಯನ್ನ ಭದ್ರತೆಗಾಗಿ ನಿಯೋಜಿಸಲಾಗಿದೆ. ನಿನ್ನೆ ನೇಮಕಗೊಂಡಿರುವ ವಿಶೇಷ ಪೊಲೀಸ್ ಆಯುಕ್ತ ಎಸ್.ಎನ್. ಶ್ರೀವಾಸ್ತವ(ಕಾನೂನು ಸುವ್ಯವಸ್ಥೆ) ಹಾಗೂ ಸತೀಶ್ ಗೋಲ್ಚಾ( ಕ್ರೈಂ) ಇಂದು ಜಾಫ್ರಾಬಾದ್ ಪ್ರದೇಶದಲ್ಲಿ ಪರಿಶೀಲನೆ ನಡೆಸಿದ್ರು. ಕೆಲವು ಪ್ರದೇಶಗಳಲ್ಲಿ ಭದ್ರತಾ ಪಡೆ ಫ್ಲಾಗ್ ಮಾರ್ಚ್ ನಡೆಸಿತು.

 

 

ಫ್ರೆಶ್ ನ್ಯೂಸ್

Latest Posts

Featured Videos