ಡೆಂಘೀಗೆ ರಾಜ್ಯದಲ್ಲಿ ಮೊದಲ ಬಲಿ

ಡೆಂಘೀಗೆ ರಾಜ್ಯದಲ್ಲಿ ಮೊದಲ ಬಲಿ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿವೆ. ಡೆಂಗ್ಯೂ ಜ್ವರವು ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.

ಕಾಲೇಜು ವಿದ್ಯಾರ್ಥಿನಿ ಸುಹನಾ ಬಾನು(18)ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ನಗರದ ಮೊಹ್ಮದ್ ಖಾನ್ ಗಲ್ಲಿ ನಿವಾಸಿಯಾಗಿರುವ ಸುಹನಾ ಬಾನುಳನ್ನು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಡೆಂಗ್ಯೂ ಜ್ವರವು ಈಡಿಸ್ ಎಂಬ ಸೊಳ್ಳೆ ಕಡಿತದಿಂದ ಹರಡುವಂತಹ ಗಂಭೀರ ಕಾಯಿಲೆಯಾಗಿದೆ. ಈಡಿಸ್ ಸೊಳ್ಳೆ ಡೆಂಗ್ಯೂ ವೈರಸ್ ಅನ್ನು ಒಬ್ಬರಿಂದ ಇನ್ನೊಬ್ಬರಿಗೆ ವರ್ಗಾಯಿಸುತ್ತದೆ.

ಕೀಲು ನೋವು, ಸ್ನಾಯು ನೋವು, ಕೆಳಹೊಟ್ಟೆಯಲ್ಲಿ ನೋವು, ವಾಂತಿ ಅಥವಾ ಮಲದಲ್ಲಿ ರಕ್ತ, ತ್ವಚೆಯ ಮೇಲೆ ಸಣ್ಣ ಕೆಂಪು ಚುಕ್ಕೆಗಳು, ಪದೇ ಪದೇ ಜ್ವರ ಮರುಕಳಿಸುವುದು, ಜ್ವರದ ತಾಪಮಾನವು 104 ಡಿಗ್ರಿವರೆಗೆ ಏರುವುದು, ಮೈ-ಕೈ ನೋವು ಮತ್ತು ಸ್ನಾಯುಗಳ ಸೆಳೆತ ಎಲ್ಲವೂ ಡೆಂಗ್ಯೂ ರೋಗದ ಲಕ್ಷಣಗಳು. ಇನ್ನು ಮುಂದಿನ ದಿನಗಳಲ್ಲಿ ಉತ್ತಮ‌ ಮಳೆಯಾಗುವ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಆರೋಗ್ಯ ಇಲಾಖೆ ಸಲಹೆ ನೀಡಿದೆ.

ಫ್ರೆಶ್ ನ್ಯೂಸ್

Latest Posts

Featured Videos