ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ

ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಅದರಲ್ಲಿಯೂ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಲ್ಲಿ 4,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ಮಕ್ಕಳಲ್ಲಿ ಹೆಚ್ಚಿನ ಪ್ರಮಾಣ ಸೋಂಕು ಕಂಡು ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಇದುವರೆಗೂ ಡೇಟಾವನ್ನು ಬಿಡುಗಡೆ ಮಾಡಿಲ್ಲ. ಆದರೆ ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ.
ಕಳೆದ ಕೆಲವು ದಿನಗಳಿಂದ 103 ಡಿಗ್ರಿ, 104 ಡಿಗ್ರಿ ಜ್ವರದಿಂದ ಬಳಲುತ್ತಿರುವ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಪ್ರಸ್ತುತ ನಮ್ಮ ವಾರ್ಡ್‌ಗಳಲ್ಲಿ 12 ಮಕ್ಕಳು ಡೆಂಗ್ಯೂ ಪೀಡಿತರಾಗಿದ್ದಾರೆ ಎಂದು ಆತ್ರೇಯಾ ಆಸ್ಪತ್ರೆಯ ಸಂಸ್ಥಾಪಕ ಮತ್ತು ವೈದ್ಯಕೀಯ ನಿರ್ದೇಶಕ ಡಾ.ನಾರಾಯಣಸ್ವಾಮಿ ತಿಳಿಸಿದರು.
ಮೂರು ಅಥವಾ ಹೆಚ್ಚು ಬಾರಿ ವಾಂತಿ ಆಗುವುದು, ಅಲರ್ಜಿ, ಅಥವಾ ರಕ್ತಸ್ರಾವದಂತಹ ರೋಗಲಕ್ಷಣಗಳು ಕಂಡು ಬಂದರೆ ನಿರ್ಲಕ್ಷಿಸಬಾರದು. ಇಂತಹ ರೋಗಲಕ್ಷಣಗಳಿರುವ ಮಕ್ಕಳಿಗೆ ಚಿಕಿತ್ಸೆ ಅಗತ್ಯ. ಇನ್ನು ಚಿಕಿತ್ಸೆ ಶುರು ಮಾಡಿ ಐದನೇ ದಿನದ ನಂತರವೂ ಜ್ವರ ಕಡಿಮೆಯಾಗದಿದ್ದರೆ, ಮಗುವನ್ನು ಆಸ್ಪತ್ರೆಗೆ ದಾಖಲಿಸಬೇಕು ಎಂದರು.

ಫ್ರೆಶ್ ನ್ಯೂಸ್

Latest Posts

Featured Videos