ರಾಜ್ಯ ರಾಜಧಾನಿಯಲ್ಲಿ ಹೆಚ್ಚಿದ ಡೆಂಗ್ಯೂ ಹಾವಳಿ

ರಾಜ್ಯ ರಾಜಧಾನಿಯಲ್ಲಿ ಹೆಚ್ಚಿದ ಡೆಂಗ್ಯೂ ಹಾವಳಿ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕರ್ನಾಟಕದಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ ಅದರಲ್ಲಿಯೂ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಲ್ಲಿ 4,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ಮಕ್ಕಳಲ್ಲಿ ಹೆಚ್ಚಿನ ಪ್ರಮಾಣ ಸೋಂಕು ಕಂಡು ಬಂದಿದ್ದು ಆತಂಕಕ್ಕೆ ಕಾರಣವಾಗಿದೆ. ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯ ಕುರಿತು ಆರೋಗ್ಯ ಇಲಾಖೆ ಇದುವರೆಗೂ ಡೇಟಾವನ್ನು ಬಿಡುಗಡೆ ಮಾಡಿಲ್ಲ. ಆದರೆ ತೀವ್ರ ಜ್ವರದಿಂದ ಬಳಲುತ್ತಿರುವ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದೆ.
ಅನಿಯಮಿತ ಮಳೆಯ ನಡುವೆ, ಬೆಂಗಳೂರಿನಲ್ಲಿ ಈ ತಿಂಗಳು ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರದಲ್ಲಿ ದಿನೇ ದಿನೇ ಡೆಂಗ್ಯೂ ಸೋಂಕು ತಗುಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಜೊತೆಗೆ ನಿಫಾ ವೈರಸ್ನ ಆತಂಕವೂ ಹೆಚ್ಚಾಗಿದ್ದು ಇದರಿಂದ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಆಗಸ್ಟ್‌ನಲ್ಲಿ 2,374 ಸೋಂಕುಗಳು ಪತ್ತೆಯಾಗಿವೆ. ಅಂದರೆ ದಿನಕ್ಕೆ ಸರಾಸರಿ 77 ಕೇಸ್ಗಳು. ಇನ್ನು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 20ರ ನಡುವೆ ಬಿಬಿಎಂಪಿ ವ್ಯಾಪ್ತಿಯಲ್ಲಿ 2,182 ಪ್ರಕರಣಗಳು ದಾಖಲಾಗಿವೆ. ಅಂದರೆ ದೈನಂದಿನ ಸರಾಸರಿ 109 ಪ್ರಕರಣಗಳು.
ಆಗಸ್ಟ್ ಮತ್ತು ಸೆಪ್ಟೆಂಬರ್‌ ತಿಂಗಳಲ್ಲಿ ಬೆಂಗಳೂರು ಪೂರ್ವ, ದಕ್ಷಿಣ ಮತ್ತು ಮಹದೇವಪುರ ವಲಯಗಳಲ್ಲಿ ಹೆಚ್ಚಿನ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಈ ತಿಂಗಳು ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗುವುದಿಲ್ಲ. ಏಕೆಂದರೆ ಪ್ರತಿದಿನವೂ ಅಂಕಿಅಂಶಗಳಲ್ಲಿ ಬದಲಾವಣೆಗಳಾಗುತ್ತಿವೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಕೆ.ವಿ.ತ್ರಿಲೋಕ್ ಚಂದ್ರ ಅವರು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos