ಹಿಂದುಳಿದ ವರ್ಗದ ಪೈಕಿ ಕಾಯಕ ಸಮಾಜದಲ್ಲಿ ಸಂಘಟನೆಗೆ ಶಕ್ತಿ ಕೆ.ಪಿ ನಂಜುಂಡಿ: ಡಿಸಿಎಂ

ಹಿಂದುಳಿದ ವರ್ಗದ ಪೈಕಿ ಕಾಯಕ ಸಮಾಜದಲ್ಲಿ ಸಂಘಟನೆಗೆ ಶಕ್ತಿ ಕೆ.ಪಿ ನಂಜುಂಡಿ: ಡಿಸಿಎಂ

ಬೆಂಗಳೂರು: ವಿಧಾನ ಪರಿಷತ್ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿ, ಕೆಪಿ ನಂಜುಂಡಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್​​ ಸುರ್ಜೇವಾಲ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಹಿಂದುಳಿದ ವರ್ಗದ ನಾಯಕರಾದ ಕೆ.ಪಿ ನಂಜುಂಡಿ ಅವರು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ ಆಗಮಿಸುತ್ತಿದ್ದಾರೆ. ನನ್ನ ರಾಜಕಾರಣದ ಅನುಭವದಲ್ಲಿ ಸಿದ್ದರಾಮಯ್ಯ ಅವರನ್ನು ಹೊರತುಪಡಿಸಿದರೆ ಹಿಂದುಳಿದ ವರ್ಗದ ಪೈಕಿ ಕಾಯಕ ಸಮಾಜದಲ್ಲಿ ಸಂಘಟನೆಗೆ ಶಕ್ತಿ ಹೊಂದಿರುವವರು ಎಂದರೆ ಅದು ಕೆ.ಪಿ ನಂಜುಂಡಿ ಎಂದು ಭಾವಿಸಿದ್ದೇನೆ.

ಸಂಘಟನೆ ಎಲ್ಲರಿಂದಲೂ ಸಾಧ್ಯವಿಲ್ಲ. ಈಗಿನ ನಾಯಕರುಗಳು ಒನ್ ಮ್ಯಾನ್ ಆರ್ಮಿ ರೀತಿ ಇರುತ್ತಾರೆ. ಆದರೆ ನಂಜುಂಡಿ ಅವರು ಬಹಳ ದೊಡ್ಡ ಪ್ರತಿಭೆ. ನಾನು ಪಕ್ಷದ ಅಧ್ಯಕ್ಷನಾದ ನಂತರ ಅವರನ್ನು ಪಕ್ಷಕ್ಕೆ ತರಲು ಅನೇಕ ಪ್ರಯತ್ನ ಮಾಡಿದೆ. ಇವರು ನಮ್ಮ ಪಕ್ಷಕ್ಕೆ ಆಸ್ತಿಯಾಗಿ ಉಳಿಯಲಿ ಏನಾದರೂ ಮಾಡು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಿಳಿಸಿದರು. ನಾನು, ಮುಖ್ಯಮಂತ್ರಿಗಳು, ಹೈಕಮಾಂಡ್ ನಾಯಕರ ಜತೆ ಚರ್ಚಿಸಿ ನಂಜುಂಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ.

ನಂಜುಂಡಿ ಅವರು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ಹಾಗೂ ನಿಮ್ಮೆಲ್ಲರ ಪರವಾಗಿ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತಿದ್ದೇನೆ. ಇವರ ಜತೆ ವಿಶ್ವಕರ್ಮ ಸಮಾಜಕ್ಕೆ ಸೇರಿದ ಅನೇಕ ನಾಯಕರು ಕೂಡ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos