ಉಪ ಸಮರ: ಮಾಜಿ ಸಚಿವ ಜಮೀರ್ ಅಹ್ಮದ್ ಮತದಾನ

ಉಪ ಸಮರ: ಮಾಜಿ ಸಚಿವ ಜಮೀರ್ ಅಹ್ಮದ್ ಮತದಾನ

ಬೆಂಗಳೂರು, ಡಿ. 05: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ನಡೆಯಲಿದೆ. ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಸೇರಿದಂತೆ 165 ಅಭ್ಯರ್ಥಿಗಳ ಭವಿಷ್ಯವನ್ನು ಇಂದು ಮತದಾರರು ತೀರ್ಮಾನಿಸಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಮತದಾನಕ್ಕೆ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಚುನಾವಣಾ ಆಯೋಗ ಕೈಗೊಂಡಿದೆ.

ಶಿವಾಜಿನಗರ ವಿಧಾನಸಭಾ ಉಪ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಮತದಾನ ಮಾಡಿದ್ದಾರೆ. ಕುವ್ವಾತುಲ್ ಇಸ್ಲಾಂ ಶಾಲೆಯ ಮತಗಟ್ಟೆಗೆ ಆಗಮಿಸಿ, ಅವರು ಮತದಾನ ಮಾಡಿದ್ದಾರೆ.

ಮತದಾನದ ಬಳಿಕ ಮಾತನಾಡಿದ ಅವರು, ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ. ರಿಜ್ವಾನ್ ಅರ್ಷದ್ ಗೆಲುವು ನಿಶ್ಚಿತ. ಕ್ಷೇತ್ರದ ಜನರ ಒಲವು ರಿಜ್ವಾನ್ ಅರ್ಷದ್ ಪರ ಇದೆ. ನಾವು ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಜಮೀರ್ ವಿಶ್ವಾಸ ವ್ಯಕ್ತಪಡಿಸಿದ್ರು.

 

ಫ್ರೆಶ್ ನ್ಯೂಸ್

Latest Posts

Featured Videos