ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಆರೋಪಿಯ ಬಂಧನ

ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಆರೋಪಿಯ ಬಂಧನ

ಬೆಂಗಳೂರು: ಇಸ್ಲಾಮ್ ಧರ್ಮದ ಸ್ಥಾಪಕ ಮಹಮ್ಮದ್ ಪೈಗಂಬರ್ ವಿರುದ್ಧ ಅವಹೇಳಕಾರಿ ಪೋಸ್ಟ್ ಹಾಕಿದ್ದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಅವರ ಸಹೋದರಿಯ ಪುತ್ರ ನವೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿದ ಪೊಲೀಸರು  110 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ.

ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವುದನ್ನು ಖಂಡಿಸಿ ಕೆಜಿ ಹಳ್ಳಿ, ಕಾವಲ್ ಭೈರಸಂದ್ರ, ಡಿಜೆ ಹಳ್ಳಿಯಲ್ಲಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದು, ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಮೂವರು ಪೊಲೀಸರು ಗುಂಡೇಟಿಗೆ ಬಲಿಯಾಗಿದ್ದು, ವರದಿಗೆ ತೆರಳಿದ್ದ ಸುದ್ದಿವಾಹಿನಿಯೊಂದರ ವರದಿಗಾರ ಹಾಗೂ ಕ್ಯಾಮರಾಮನ್ ಮೇಲೆ ಹಲ್ಲೆ ನಡೆದಿದೆ.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಮಂಗಳವಾರ ನಡೆದ ಗಲಭೆಯನ್ನು ಖಂಡಿಸಿದ್ದು, ದುಷ್ಕರ್ಮಿಗಳ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ಆದೇಶಿಸಿದ್ದಾರೆ.

ಈ ಘಟನೆಯನ್ನು ವಿರೋಧಿಸಿ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದು, ಹಿಂದೂ ಮುಸ್ಲಿಮ್ ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಟ್ವೀಟ್ ಮಾಡಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಿನಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತಹವರನ್ನು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos