ಈ ಬಾರಿ ದೇಶದಲ್ಲಿ ಬಿಜೆಪಿ 300 ಸ್ಥಾನಗಳನ್ನು ಗಳಿಸಲಿದೆ : ಯಡಿಯೂರಪ್ಪ

ಈ ಬಾರಿ ದೇಶದಲ್ಲಿ ಬಿಜೆಪಿ 300 ಸ್ಥಾನಗಳನ್ನು ಗಳಿಸಲಿದೆ : ಯಡಿಯೂರಪ್ಪ

ಬಳ್ಳಾರಿ, . 2, ನ್ಯೂಸ್ ಎಕ್ಸ್ ಪ್ರೆಸ್: ಬಳ್ಳಾರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು, ಕಳೆದ ಬಾರಿ ಲೋಕಸಭೆ ಚುನಾವಣೆಗಿಂತ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆ ಹೆಚ್ಚಾಗಿದ್ದು, ದೇಶದಲ್ಲಿ ಬಿಜೆಪಿ 300 ಸ್ಥಾನಗಳನ್ನು ಗಳಿಸಲಿದೆ. ರಾಜ್ಯದಲ್ಲಿ 22ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದು ಅಧ್ಯಕ್ಷ ಹೇಳಿದರು.

ಕಳೆದ ಬಾರಿಗಿಂತ ಹೆಚ್ಚು ಬಹುಮತ ಗಳಿಸಿ ಬಿಜೆಪಿ ಅಧಿಕಾರ ಹಿಡಿಯಲಿದೆ, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದರು. ನನ್ನ ಮೇಲೆ ಡೈರಿ ಸಂಬಂಧ ಸುಳ್ಳು ಆರೋಪ ಮಾಡಲಾಗಿದೆ. ಐಟಿ ಇಲಾಖೆಯವರು ಅದು ನಕಲಿ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಕಲಬುರಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಉಮೇಶ್ ಜಾದವ್ ಅವರು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಅಂಗೀಕರಿಸಿರುವ ಸ್ಪೀಕರ್ ರಮೇಶ್ಕುಮಾರ್ ಅವರ ಕ್ರಮ ಸ್ವಾಗತಾರ್ಹ ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಒಟ್ಟಾಗಿ ಪ್ರಚಾರ ಮಾಡುತ್ತೇವೆ. ನಾನು ಕೂಡ ಇದರಲ್ಲಿ ಭಾಗವಹಿಸುತ್ತೇನೆ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos