ಸೋಲುವ ಹತಾಶೆಯಲ್ಲಿ ಕಾಂಗ್ರೆಸ್ ಏನೇನೋ ಮಾತಾಡುತ್ತೆ: ಅಣ್ಣಾಮಲೈ

ಸೋಲುವ ಹತಾಶೆಯಲ್ಲಿ ಕಾಂಗ್ರೆಸ್ ಏನೇನೋ ಮಾತಾಡುತ್ತೆ: ಅಣ್ಣಾಮಲೈ

ಬಾಗಲಕೋಟೆ: ಕರ್ನಾಟಕ ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಎಲ್ಲಾ ರೀತಿಯ ಭರ್ಜರಿ ತಯಾರಿ ನಡೆಯುತ್ತಿದ್ದು, ತಮಿಳುನಾಡಿನ ಬಿಜೆಪಿ ಮುಖಂಡ ಕೆ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕರ್ನಾಟಕ ರಾಜ್ಯದಲ್ಲಿ ಅಬ್ಬರದ ಪ್ರಚಾರವನ್ನು ಕೈಗೊಂಡಿದ್ದಾರೆ.

ಜಮಖಂಡಿ ಮತ್ತು ರಬಕವಿ ಬನಹಟ್ಟಿಯಲ್ಲಿ ಇಂದು (ಗುರುವಾರ ಮೇ 02) ರಂದು ಅಣ್ಣ ಅಣ್ಣಾಮಲೈ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ಮಾಡಿದ್ದಾರೆ.

ಇನ್ನು ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯ ಕೂಡಾ 2019ರ ಚುನಾವಣೆಯಲ್ಲಿಯಂತೆ ಉತ್ತರ ಕರ್ನಾಟಕದ ಎಲ್ಲಾ 14 ಸ್ಥಾನಗಳನ್ನು ಬಿಜೆಪಿ ಈ ಬಾರಿಯೂ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸೋಲಲಿರುವ ಪಕ್ಷ. ಸೋಲುವವರು ಹತಾಶೆಯಲ್ಲಿ ಏನೇನೋ ಮಾತನಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. ‘ನಾವು 10 ವರ್ಷ ಕೆಲಸ ಮಾಡಿದ್ದೇವೆ. ನಮ್ಮ ಕೆಲಸವನ್ನು ಜನರು ನೋಡಿದ್ದಾರೆ. ಇನ್ನೂ 5 ವರ್ಷ ಮೋದಿಜಿ ಬೇಕು. ಜನರು ಈ ಬಾರಿಯೂ ಎನ್​ಡಿಎಯನ್ನು ಬೆಂಬಲಿಸಲು ತೀರ್ಮಾನ ಮಾಡಿದ್ದಾರೆ,’ ಎಂದು ಹೇಳಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos