ತಿರುವನಂತಪುರಂಆ. 14: ರಾಜ್ಯದ ಉತ್ತರ ಭಾಗದಲ್ಲಿ ಮಳೆ ಆರ್ಭಟ ಕಡಿಮೆಯಾದೆ. ದೇವರ ನಾಡಿನಲ್ಲಿ ವರುಣನ ರುದ್ರ ನರ್ತನ ತಾಳಿದ್ದಾನೆ. ಮಲಪ್ಪುರಂ ಹಾಗೂ ಕೋಯಿಕ್ಕೋಡ್ನಲ್ಲಿ ರೆಡ್ ಅಲರ್ಟ್ ಮುಂದುವರಿದಿದ್ದು, ಕೊಲ್ಲಂ, ಪಟ್ಟಣಂತಿಟ್ಟ, ಕೊಟ್ಟಾಯಂ, ಪಾಲಕ್ಕಾಡ್ ಹಾಗೂ ತ್ರಿಶ್ಶೂರ್ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆಯ ಪ್ರಮಾಣ ಹೆಚ್ಚಾಗುತ್ತಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಿರುವ ಜಿಲ್ಲೆಗಳಲ್ಲಿ 20 ಸೆಂ.ಮಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಣಭೀಕರ ಮಳೆ ರಾಜ್ಯಾದ್ಯಂತ ಈ ವರೆಗೆ 90 ಮಂದಿಯನ್ನು ಬಲಿ ಪಡೆದುಕೊಂಡಿದ್ದು, 40 ಮಂದಿ ಕಣ್ಮರೆಯಾಗಿದ್ದಾರೆ. ರಾಜ್ಯಾದ್ಯಂತ 1,332 ಕಾಳಜಿ ಕೇಂದ್ರಗಳಲ್ಲಿ 2.52 ಲಕ್ಷ ಜನ ಆಶ್ರಯ ಪಡೆದುಕೊಂಡಿದ್ದಾರೆ.