‘ವಿಶ್ವನಾಥರಿಗೆ ಒಳ್ಳೆಯ ಬುದ್ಧಿ ಕೊಡಲಿ’- ಸಿದ್ದರಾಮಯ್ಯ

‘ವಿಶ್ವನಾಥರಿಗೆ ಒಳ್ಳೆಯ ಬುದ್ಧಿ ಕೊಡಲಿ’- ಸಿದ್ದರಾಮಯ್ಯ

ಬೆಂಗಳೂರು , ಮೇ. 13, ನ್ಯೂಸ್ ಎಕ್ಸ್ ಪ್ರೆಸ್: ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ವಿಶ್ವನಾಥ ಅವರಿಗೆ ದೇವರು ಒಳ್ಳೆಯ ಬುದ್ಧಿ ಒದಗಿಸಲಿ ಎಂದು ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಸಿದ್ದರಾಮಯ್ಯರನ್ನು ಕಾಂಗ್ರೆಸ್ ಗೆ ಕರೆತಂದು ಸಿಎಂ ಆಗುವಂತೆ ಮಾಡಿದ್ದು ನಾನು, ಮತ್ತೊಮ್ಮೆ ಸಿಎಂ ಆಗಲಿ ಎಂದು ಕೆಲವರು ಚೇಲಾಗಿರಿ ಪ್ರದರ್ಶಿಸುತ್ತಿದ್ದಾರೆ ಎಂಬ ಹೆಚ್.ವಿಶ್ವನಾಥ್ ಹೇಳಿಕೆಗೆ ಸಿದ್ದರಾಮಯ್ಯ ಟ್ವಿಟ್ ರ್ ನಲ್ಲಿ ಅವರು ಉತ್ತರ ನೀಡಿ“ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ವಿಶ್ವನಾಥ್ ಅವರು ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ”ಎಂದಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್ ನಡುವಿನ ಭಿನ್ನಮತ ಮುಂದುವರೆದಿದೆ. ಜೆಡಿಎಸ್ ಅಧ್ಯಕ್ಷ ಹೆಚ್. ವಿಶ್ವನಾಥ್ ಅವರ ಹೊಟ್ಟೆಕಿಚ್ಚಿನ ಮಾತುಗಳನ್ನ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ, ಈಗ ವಿಶ್ವನಾಥ್,ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನಹರಿಸುವುದು ಒಳಿತು”ಅಂತಾ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos