ಹೆಚ್​.ಡಿ. ದೇವೇಗೌಡ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌!

ಹೆಚ್​.ಡಿ. ದೇವೇಗೌಡ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌!

ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿರುವ ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಚಿಕಿತ್ಸೆ ಮುಂದುವರಿದಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡ ಅವರು ಆರೋಗ್ಯವಾಗಿದ್ದಾರೆ, ಏನು ತೊಂದರೆಯಿಲ್ಲ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲಿದ್ದಾರೆ. ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದ್ದು. ಉಸಿರಾಟ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದ್ದು, ದೇವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲದಿಂದ ತಿಳಿದುಬಂದಿದೆ.

ಗುರುವಾರ ಬೆಳಿಗ್ಗೆ ಉಸಿರಾಟ ಸಮಸ್ಯೆ ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಮಣಿಪಾಲ್‌ ಆಸ್ಪತ್ರೆಗೆ ಕರೆದುಕೊಂಡೊ ಹೋಗಲಾಗಿದ್ದು. ಶ್ವಾಸಕೋಶ ತಜ್ಞ ಡಾ.ಸತ್ಯನಾರಾಯಣ ಅವರು ಪರೀಕ್ಷೆ ನಡೆಸಿ, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos