ಶಿಕ್ಷಣ ಮತ್ತು ಕ್ರೀಡೆಯಿಂದ ಅಭಿವೃದ್ಧಿ ಸಾಧ್ಯ

ಶಿಕ್ಷಣ ಮತ್ತು ಕ್ರೀಡೆಯಿಂದ ಅಭಿವೃದ್ಧಿ ಸಾಧ್ಯ

ದೇವನಹಳ್ಳಿ, ಸೆ. 26: ಯಾವುದೇ ಒಂದು ದೇಶ ಸರ್ವತೋಮುಖವಾಗಿ ಅಭಿವೃದ್ಧಿ ಹೊಂದಬೇಕಾದರೆ ಶಿಕ್ಷಣ ಮತ್ತು ಕ್ರೀಡೆಯಿಂದ ಮಾತ್ರ ಸಾದ್ಯವಾಗುತ್ತದೆ. ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದ ಗುಡ್ಡಗಾಡು ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಗಳನ್ನು ಅನಾವರಣ ಮಾಡಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಡಾ.ಕೆಂಪರಾಜು ಕರೆ ನೀಡಿದರು.

ನಗರದ ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ದೈಹಿಕ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವತಿಯಿಂದ ಹಮ್ಮಿಕೊಂಡಿದ್ದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಗುಡ್ಡಗಾಡು ಓಟದ ಸ್ಪರ್ಧೆ ಹಾಗೂ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಟ್ಟದ ಗುಡ್ಡಗಾಡು ಓಟದ ಸ್ಪರ್ದೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ 258 ಕಾಲೇಜುಗಳು ಬರಲಿದೆ. ಅದರಲ್ಲಿ ಒಟ್ಟು 36 ಕಾಲೇಜುಗಳಿಂದ ಪುರುಷರು 98, ಮಹಿಳೆಯರು 51 ಸೇರಿದಂತೆ ಒಟ್ಟು 149 ವಿದ್ಯಾರ್ಥಿಗಳು ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಇಲ್ಲಿ ಆಯ್ಕೆಯಾದವರು ಪುರುಷರ ವಿಭಾಗದಲ್ಲಿ 6 ಜನ ಮಂಗಳೂರಿನಲ್ಲಿ ನಡೆಯುವ ರಾಷ್ಟ್ರೀಯ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಪ್ರತಿನಿಧಿಸಲಿದ್ದಾರೆ. ಹೈದರಾಬಾದಿನಲ್ಲಿ ನಡೆಯಲಿರುವ ಮಹಿಳೆಯರ ರಾಷ್ಟ್ರೀಯ ಗುಡ್ಡಗಾಡು ಓಟದ ಸ್ಪರ್ಧೆಗೆ 6 ಜನರನ್ನು ಕಳುಹಿಸಿಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಯುವ ಸಮುದಾಯ ಕ್ರೀಡೆಗಳಿಗೆ ಹೆಚ್ಚಿನ ಒತ್ತನ್ನು ಕೊಡಬೇಕು. ದೇಶದಲ್ಲಿರುವ ಸಂಪನ್ಮೂಲವನ್ನು ಬಳಸಿಕೊಂಡು ಕ್ರೀಡೆಗಳಲ್ಲಿ ಪ್ರಗತಿ ಸಾಧಿಸಬೇಕು. ನಿರಂತರ ಅಭ್ಯಾಸವನ್ನು ಮಾಡಬೇಕು. ಸರಿಯಾದ ಮಾರ್ಗದರ್ಶನ ಮತ್ತು ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.

ದೈಹಿಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಶ್ರೀ

ಕಾಂತ್ ಮಾತನಾಡಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಗುಡ್ಡಗಾಡು ಓಟದ ಸ್ಪರ್ಧೆಯನ್ನು ಮಾಡುವುದರ ಮೂಲಕ ವಿದ್ಯಾರ್ಥಿಗಳಲ್ಲಿ ಅವರ ಸಾಮರ್ಥ್ಯವನ್ನು

ಗುರ್ತಿಸಿ ಮಾನಸಿ

ಕ ಸ್ಥೈರ್ಯವನ್ನು ಹೆಚ್ಚಿಸುವ ಕೆಲಸವನ್ನು ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಖೋ-ಖೋ ಮತ್ತು ಕಬಡ್ಡಿ ಕ್ರೀಡೆಗಳಿಗೆ ಆಯ್ಕೆ ಮಾಡಲಾಗುತ್ತಿದೆ. ಕಾಲಕಾಲಕ್ಕೆ ವಿವಿಧ ಸೌಲಭ್ಯಗಳನ್ನು ಕ್ರೀಡಾಪಟುಗಳಿಗೆ ಒದಗಿಸಲಾಗುತ್ತಿದೆ ಎಂದರು.

ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ವಿ.ಹನುಮಂತಪ್ಪ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜೊತೆ ಕ್ರೀಡೆಗೂ ಸಹ ಹೆಚ್ಚಿನ ಆದ್ಯತೆ ಕೊಡಬೇಕು. ಕ್ರೀಡೆ ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಸತತವಾಗಿ ಕ್ರೀಡೆಗಳಲ್ಲಿ ಪಾಲ್ಗೊಂಡು ಗೆಲುವಿನ ಹೆಜ್ಜೆಯನ್ನು ಇಡಬೇಕು. ಸೋತವರು ಮುಂದಿನ ದಿನಗಳಲ್ಲಿ ಸತತ ಪ್ರಯತ್ನಪಡುವುದರ ಮೂಲಕ ಗೆಲುವಿನ ಮೆಟ್ಟಿಲು ಏರುವಂತೆ ಆಗಬೇಕು ಎಂದು ಕರೆ ನೀಡಿದರು.

ಗುಡ್ಡಗಾಡು ಓಟದ ಸ್ಪರ್ಧೆಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಸಚಿವ ಡಾ.ಆರ್.ಶ್ರೀನಿವಾಸ್ ಚಾಲನೆ ನೀಡಿ ಮಾತನಾಡಿದರು.

ವಿಜೇತರಾದ ಕ್ರೀಡಾಪಟುಗಳು: ಮಹಿಳಾ ವಿಭಾಗದಲ್ಲಿ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ವಿಜೇತರಾದ ಲಾವಣ್ಯ, ಲಕ್ಷ್ಮಣ್, ದಿವ್ಯ ಆರ್, ಅನುಷ, ಸಂಗೀತ, ಪೂರ್ವಿಕಾ, ಪುರುಷರ ವಿಭಾಗದಲ್ಲಿ ಶ್ರೀಕಾಂತ್, ಲಕ್ಷ್ಮಣ್ ಎಸ್, ಜಗದೀಶ್, ಹರೀಶ್ ಕುಮಾರ್, ಬೋರೆಗೌಡ, ನಿರಂಜನ್ ಗೌಡ ಆಯ್ಕೆಯಾಗಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos