ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ

ಧಾರವಾಡ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನಯ್ ಕುಲಕರ್ಣಿ

ಧಾರವಾಡ, . 3, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ನೀಡಿದೆ ಮತ್ತು ದಾವಣಗೆರೆ ಕ್ಷೇತ್ರದ ಅಭ್ಯರ್ಥಿಯಾಗಿ ಎಚ್.ಬಿ. ಮಂಜಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.

ಪಕ್ಷೇತರವಾಗಿ ವಿನಯ್ ಕುಲಕರ್ಣಿ ಅವರು ನಾಮಪತ್ರ ಸಲ್ಲಿಕೆ ಮಾಡುವುದಾಗಿ ಘೋಷಣೆ ಮಾಡಿದ್ದರು. ಆದರೆ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಘೋಷಣೆಯಾಗಿದೆ.

ದಾವಣಗೆರೆ ಕ್ಷೇತ್ರಕ್ಕೆ ಈ ಹಿಂದೆ ಶಾಮನೂರು ಶಿವಶಂಕರಪ್ಪ ಅವರ ಹೆಸರು ಘೋಷಣೆ ಮಾಡಲಾಗಿತ್ತು.

ಆದರೆ ಸ್ಪರ್ಧೆಗೆ ಶಾಮನೂರು ಹಿಂದೇಟು ಹಾಕಿದ್ದರು. ಹೀಗಾಗಿ ಅವರ ಪುತ್ರ ಎಸ್.ಎಸ್. ಮಲ್ಲಿಕಾರ್ಜುನ್ ಸ್ಪರ್ಧೆಗೆ ಕಾಂಗ್ರೆಸ್ ಮುಖಂಡರು ಸೂಚಿಸಿದ್ದರು. ಆದರೆ. ಅವರು ತನಗೆ ಬೇಡವೆಂದ ಕಾರಣ ಮಂಜಪ್ಪ ಅವರಿಗೆ ಕೊನೆಯ ಕ್ಷಣದಲ್ಲಿ ಪಕ್ಷ ಟಿಕೆಟ್ ನೀಡಿದೆ.

ಫ್ರೆಶ್ ನ್ಯೂಸ್

Latest Posts

Featured Videos