ದರ್ಶನ್ಗೆ ಭದ್ರಾವತಿ ಹುಡ್ಗಿ ಜೋಡಿ

ದರ್ಶನ್ಗೆ ಭದ್ರಾವತಿ ಹುಡ್ಗಿ ಜೋಡಿ

ಬೆಂಗಳೂರು, ಸೆ. 4 : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ‘ರಾಬರ್ಟ್’ ಸಿನಿಮಾದಲ್ಲಿ ನಾಯಕಿ ವಿಚಾರದಲ್ಲಿ ಭಾರೀ ಸದ್ದು ಮಾಡಿತ್ತು. ಅಭಿಮಾನಿಗಳಿಗೆ ದರ್ಶನ್ಗೆ ಜೋಡಿ ಯಾರಾಗುತ್ತಾರೆ ಎಂಬ ಕುತೂಹಲವಿತ್ತು. ಇದೀಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ನಿರ್ದೇಶಕ ತರುಣ್ ಅವರು ನಾಯಕಿ ಯಾರೆಂದು ಅಧಿಕೃತವಾಗಿ ಫೋಷಣೆ ಮಾಡಿದ್ದಾರೆ.
‘ರಾಬರ್ಟ್’ ಸಿನಿಮಾದಲ್ಲಿ ದರ್ಶನ್ಗೆ ಜೋಡಿಯಾಗಿ ನಟಿ ಆಶಾ ಭಟ್ ಆಯ್ಕೆಯಾಗಿದ್ದಾರೆ. ಇಂದು ಬೆಳಗ್ಗೆ ತರುಣ್ ಸುಧೀರ್ ಅವರು ‘ರಾಬರ್ಟ್’ ಸಿನಿಮಾದಲ್ಲಿ ನಾಯಕಿ ಯಾರು ಎಂದು ಸಂಜೆ 4.02 ಗಂಟೆಗೆ ಅಧಿಕೃತವಾಗಿ ಘೋಷಣೆ ಮಾಡುವುದಾಗಿ ತಿಳಿಸಿದ್ದರು. ಈಗ ಅದೇ ರೀತಿ ಅವರ ಫೋಟೋ ಸಮೇತ ನಾಯಕಿಯ ಬಗ್ಗೆ ರಿವೀಲ್ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos