ಧೋನಿ ದಾಖಲೆ ಮುರಿದ ಕನ್ನಡಿಗ

ಧೋನಿ ದಾಖಲೆ ಮುರಿದ ಕನ್ನಡಿಗ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್​ನ 34ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿತ್ತು. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಟಾಸ್ ಗೆದ್ದು ಎಲ್​ಎಸ್​ಜಿ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್​ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಉತ್ತಮ ಆರಂಭ ಒದಗಿಸಿದರು. ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದ ಕೆಎಲ್ ರಾಹುಲ್ 53 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 82 ರನ್ ಬಾರಿಸಿದರು. ಈ ಅರ್ಧಶತಕದೊಂದಿಗೆ ಐಪಿಎಲ್​ನಲ್ಲಿ ಅತೀ ಹೆಚ್ಚು ಹಾಫ್ ಸೆಂಚುರಿ ಸಿಡಿಸಿದ ವಿಕೆಟ್ ಕೀಪರ್ ಎನಿಸಿಕೊಂಡರು.

116 ಐಪಿಎಲ್​ ಇನಿಂಗ್ಸ್​ಗಳಲ್ಲಿ ಕೆಎಲ್ ರಾಹುಲ್ ಇದುವರೆಗೆ 35 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ವೇಳೆ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಾಗ 25 ಹಾಫ್ ಸೆಂಚುರಿ ಸಿಡಿಸಿದ್ದಾರೆ. ಈ ಮೂಲಕ ಧೋನಿ ಹೆಸರಿನಲ್ಲಿದ್ದ 24 ಅರ್ಧಶತಕಗಳ ದಾಖಲೆಯನ್ನು ಕೆಎಲ್ ರಾಹುಲ್ ಮುರಿದಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos