ಧೋನಿ, ದಾದಾಗೆ ಹಿಂದಿಕ್ಕಿ ಕೊಹ್ಲಿ

ಧೋನಿ, ದಾದಾಗೆ ಹಿಂದಿಕ್ಕಿ ಕೊಹ್ಲಿ

ಜಮೈಕಾ, ಸೆ. 3 : ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತಕ್ಕೆ ಅತಿಹೆಚ್ಚು ಗೆಲುವು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದು, ಎಂಎಸ್ ಧೋನಿ, ಸೌರವ್ ಗಂಗೂಲಿ ದಾಖಲೆಗಳನ್ನು ಕೊಹ್ಲಿ ಹಿಂದಿಕ್ಕಿದ್ದಾರೆ. ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯ 2ನೇ ಹಾಗೂ ಕೊನೆಯ ಪಂದ್ಯ ಭಾರತ ತಂಡ ಗೆಲುವು ಸಾಧಿಸಿದೆ. ನಾಯಕ ವಿರಾಟ್ ಕೊಹ್ಲಿ ಅಪರೂಪದ ಸಾಧನೆ ಮಾಡಿದ್ದಾರೆ.
ಕೊಹ್ಲಿ ಒಟ್ಟು 48 ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು, 28 ಗೆಲುವು ತಂದುಕೊಟ್ಟಿದ್ದಾರೆ. ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತಕ್ಕೆ ಅತಿಹೆಚ್ಚು ಗೆಲುವು ತಂದುಕೊಟ್ಟ ನಾಯಕ ಎಂಬ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ. ಧೋನಿ ನಾಯಕತ್ವದಲ್ಲಿ ಭಾರತ ಒಟ್ಟು 27 ಪಂದ್ಯಗಳಲ್ಲಿ ಜಯ ದಾಖಲಿಸಿತ್ತು.
ವೆಸ್ಟ್ ಇಂಡೀಸ್ ವಿರುದ್ಧ 2ನೇ ಪಂದ್ಯದಲ್ಲಿ ಭಾರತ ತಂಡ 257 ರನ್ ಗಳ ಭರ್ಜರಿ ಜಯ ದಾಖಲಿಸಿತ್ತು. ಈ ಜಯದೊಂದಿಗೆ ಕೊಹ್ಲಿ 2-0ಅತರದಲ್ಲಿ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ಪೀಪ್ ಮಾಡಿತು.

ಫ್ರೆಶ್ ನ್ಯೂಸ್

Latest Posts

Featured Videos