ಧೋನಿ ಕಾಶ್ಮೀರದಲ್ಲಿ ಸೇನಾ ಕರ್ತವ್ಯ

ಧೋನಿ ಕಾಶ್ಮೀರದಲ್ಲಿ ಸೇನಾ ಕರ್ತವ್ಯ

ನವದೆಹಲಿ, ಜು, 26 : ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಾಶ್ಮೀರದಲ್ಲಿ ಸೇನಾ ಕರ್ತವ್ಯ ನಿರ್ವಹಿಸಲಿದ್ದಾರೆ.
ಪ್ಯಾರಾಚೂಟ್ ರೆಜಿಮೆಂಟ್ನ 106ನೇ ಬೆಟಾಲಿಯನ್ನೊಂದಿಗೆ ಗಸ್ತು, ನಿಗಾ ಕಾರ್ಯಾಚರಣೆ ಸೇರಿದಂತೆ ಸೇನೆಯ ವಿವಿಧ ವಿಭಾಗದಲ್ಲಿ ಧೋನಿ ಕೆಲಸ ನಿರ್ವಹಿಸಲಿದ್ದಾರೆ. ಜತೆಗೆ ಅಷ್ಟೂ ಸಮಯ ಸೇನೆಯೊಂದಿಗೆ ಇರಲಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ವಿಶ್ವಕಪ್ ಕ್ರಿಕೆಟ್ ಬಳಿಕ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿಯಾಗುವ ಬಗ್ಗೆ ಸುದ್ದಿಗಳು ಹರಿದಾಡಿದ್ದವು. ಆದರೆ ಧೋನಿ ಮಾತ್ರ ಯಾವುದೇ ಹೇಳಿಕೆ ನೀಡಿರಲ್ಲಿ. ವೆಸ್ಟ್ ಇಂಡೀಸ್ ಸರಣಿಗೆ ಭಾರತ ತಂಡದ ಆಯ್ಕೆ ನಡೆಯುತ್ತಿರುವ ವೇಳೆಯಲ್ಲೇ ಧೋನಿ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುವ ಸಲುವಾಗಿ 2 ತಿಂಗಳು ರಜೆ ತೆಗೆದುಕೊಂಡಿದ್ದರು. ಹೀಗಾಗಿ ವಿಂಡೀಸ್ ಪ್ರವಾಸದಿಂದ ಹೊರಗುಳಿದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos