ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಡೈಮಂಡ್ ಕಾಲೇಜ್

ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಡೈಮಂಡ್ ಕಾಲೇಜ್

ಕೆ.ಆರ್.ಪುರ, ಜ. 25: ಶಿಕ್ಷಣ ಪಡೆಯುವ ಜೊತೆಗೆ ಸಾಮಾಜಿಕ ಜಾಲತಾಣವನ್ನು ಸರ್ಮಪಕ ಬಳಕೆ ಮಾಡುವ ಮೂಲಕ ಹೆಚ್ಚು ಜ್ಞಾನದಿಂದ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿ ಪೋಷಕರಿಗೆ ಕೀರ್ತಿ ತರುವಂತೆ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ರಿಜಿಸ್ಟರ್ ಡಾ.ಲಿಂಗೇಗೌಡ ಅವರು ತಿಳಿಸಿದರು.

ಕೆ.ಆರ್.ಪುರದ ಸಮೀಪವಿರುವ ಡೈಮಂಡ್ ಕಾಲೇಜಿನಲ್ಲಿ ಏರ್ಪಡಿಸಿದ್ದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಡೈಮಂಡ್ ಕಾಲೇಜನಲ್ಲಿ ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ಶಿಕ್ಷಣ ಪಡೆದುಕೊಂಡು  ಪದವಿದರರಾಗಬೇಕೆಂದು ಸಲಹೆ ನೀಡಿದರು. ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆಯಲು ಉತ್ತಮ ವಾತಾವರಣ ವಿದ್ದು ಇದರ ಸಧ್ಬಳಿಕೆ ಮಾಡಿಕೊಳ್ಳುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳ ಬೇಕೆಂದು ಸಲಹೆ ನೀಡಿದರು.ಈ ಸಂದರ್ಭದಲ್ಲಿ ಡೈಮಂಡ್ ವಿದ್ಯಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಿ.ನಾರಾಯಣ ರೆಡ್ಡಿ ಅವರು ಮಾತನಾಡಿ, ಡೈಮಂಡ್‌ ವಿದ್ಯಾ ಸಂಸ್ಥೆ ಉತ್ತಮ ಶಿಕ್ಷಣಕ್ಕೆ ಹೆಚ್ಚು ಪೂರಕವಾಗಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಲು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಗುರುರಾಜ್, ಡಾ.ಪ್ರವೀಣ್ ನಾರಾಯಣ ರೆಡ್ಡಿ, ಶಿಕ್ಷಕ ವೃಂದದವರು ಹಾಗೂ ಪೋಷಕರು ಹಾಗೂ ಮತ್ತಿತರರು ಹಾಜರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos