ಜೆಡಿಎಸ್ ಜೊತೆ ಡಿಕೆಶಿ ಕುಚುಕು

ಜೆಡಿಎಸ್ ಜೊತೆ ಡಿಕೆಶಿ ಕುಚುಕು

ಬೆಂಗಳೂರು, ನ. 9 : ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ಜೆಡಿಎಸ್ ನಾಯಕರ ಜೊತೆ ಆತ್ಮೀಯತೆ ಹೆಚ್ಚಿಸಿಕೊಳ್ಳುವ ಮೂಲಕ ಸಿದ್ದರಾಮಯ್ಯನವರಿಗೆ ಟಾಂಗ್ ನೀಡಲು ಆರಂಭಿಸಿದ್ದಾರೆ.
ಇತ್ತೀಚೆಗೆ ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಏರ್ಪೋರ್ಟ್ಗೆ ತೆರಳಿ ಸ್ವಾಗತಿಸಿದ್ದರು. ಸಮಾವೇಶದಲ್ಲಿ ಡಿ.ಕೆ.ಶಿವಕುಮಾರ್ ಜೆಡಿಎಸ್ನ ಬಾವುಟವನ್ನು ಹಿಡಿದದ್ದು ಚರ್ಚೆಗೆ ಗ್ರಾಸವಾಗಿತ್ತು. ಸಿದ್ದರಾಮಯ್ಯ ಮತ್ತು ಅವರ ಬೆಂಬಲಿಗರು ಇದನ್ನು ತೀವ್ರವಾಗಿ ಆಕ್ಷೇಪಿಸಿದರು. ಇತ್ತೀಚೆಗೆ ಬಹಿರಂಗ ಸಭೆಗಳಲ್ಲಿ ಸಿದ್ದರಾಮಯ್ಯನವರು ಬಿಜೆಪಿಗಿಂತಲೂ ಹೆಚ್ಚಾಗಿ ಜೆಡಿಎಸ್ ನಾಯಕರನ್ನೇ ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos