ಖರ್ಗೆ ಜೊತೆ ಡಿಕೆಶಿ ಮಾತುಕತೆ..!

ಖರ್ಗೆ ಜೊತೆ ಡಿಕೆಶಿ ಮಾತುಕತೆ..!

ಬೆಂಗಳೂರು, ಮಾ. 14: ಮಾಜಿ ಸಿಎಂ ಸಿದ್ದರಾಮಯ್ಯರ ಭೇಟಿ ಬೆನ್ನಲ್ಲೇ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ.

ಸದಾಶಿವನಗರದ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಅವರು, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ. ಅಲ್ಲದೇ ಪಕ್ಷ ಸಂಘಟನೆಗೆ ಸಹಕಾರ ನೀಡುವಂತೆ ಕೋರಿದ್ದಾರೆ. ಈ ವೇಳೆ ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ರಂಗನಾಥ್ ಇದ್ದರು.

ಖರ್ಗೆ ಭೇಟಿಗೂ ಮುಂಚೆ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿದ್ದರು. ಪಕ್ಷ ಸಂಘಟನೆ ಸಂಬಂಧ ಅರ್ಧ ಗಂಟೆಗಳ ಕಾಲ ಚರ್ಚೆ ನಡೆಸಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos